ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿ ಸೇರಿದಂತೆ 2023–24ನೇ ಸಾಲಿನ ಮೆಟ್ರಿಕ್ ನಂತರದ ಕೆಲವು ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ–1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 30ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಆನ್ಲೈನ್ https://ssp.postmatric.karnataka.gov.in ಮೂಲಕ ಮಾರ್ಚ್ 30ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050770005, ದೂ.ವಾ.ಸಂ.1902ನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4