ಬೀದರ್: ಜಿಲ್ಲೆಯಲ್ಲಿ ಹೋಳಿ ಹಬ್ಬವನ್ನು ಶಾಂತಿಯುತವಾಗಿ ಆಚರಿಸಲು, ಹಬ್ಬದ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಆದೇಶ ಹೊರಡಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರಲ್ಲಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬೀದರ್, ಹುಮನಾಬಾದ್, ಬಸವಕಲ್ಯಾಣ, ಔರಾದ್(ಬಿ),ಕಮಲನಗರ್, ಹುಲಸೂರ್ ಹಾಗೂ ಚಿಟಗುಪ್ಪಾ ತಾಲ್ಲೂಕುಗಳಲ್ಲಿ ಮಾ.13 ರ ಸಾಯಂಕಾಲ 6 ಗಂಟೆಯಿಂದ ಮಾ.14 ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಭಾಲ್ಕಿ ತಾಲ್ಲೂಕುಗಳಲ್ಲಿ ಮಾ.13 ರ ಸಾಯಂಕಾಲ 6 ಗಂಟೆಯಿಂದ ಮಾ.14 ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಭಾಲ್ಕಿ ತಾಲ್ಲೂಕಿನಲ್ಲಿ ಮಾ.13 ರ ಸಾಯಂಕಾಲ 6 ಗಂಟೆಯಿಂದ ಮಾ.15 ರ ಮಧ್ಯರಾತ್ರಿ 12 ಗಂಟೆವರೆಗೆ ಎಲ್ಲಾ ವಿಧದ ಮದ್ಯದ ಅಂಗಡಿಗಳು ಮುಚ್ಚಲು ಹಾಗೂ ಮದ್ಯ ಮಾರಾಟ ಮಾಡುವುದನ್ನು ನಿಷೇಧಿಸಿದೆ ಅವರು ಆದೇಶಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4