ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕು ತುಯಲಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ಹಿಂದೆ ದ್ವಿತೀಯ ದರ್ಜೆ ಸಹಾಯಕ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಬಸವರಾಜು ಎಸ್. ಮಠ ಅವರು ದಿನಾಂಕ:14-10-2010ರಂದು ಸೇವೆಗೆ ಸೇರಿ ನಂತರ ದಿನಾಂಕ: 9—6–2017 ರಿಂದ 15—3–2023ರವರೆಗೆ ಕರ್ತವ್ಯಕ್ಕೆ ಅನಧಿಕೃತ ದೀರ್ಘಕಾಲ ಗೈರು ಹಾಜರಾಗಿದ್ದಾರೆ. ನಂತರ ವರ್ಗಾವಣೆ ಹೊಂದಿದ ಶಾಲೆಯಲ್ಲಿಯೂ ಸಹ ಕರ್ತವ್ಯಕ್ಕೆ ಹಾಜರಾಗಿರುವುದಿಲ್ಲ.
ಕರ್ತವ್ಯಕ್ಕೆ ಹಾಜರಾಗುವಂತೆ ಬಸವರಾಜು ಎಸ್. ಮಠ ಅವರಿಗೆ ಹಲವಾರು ಬಾರಿ ನೋಟೀಸ್ಗಳನ್ನು ನೋಂದಾಯಿತ ಅಂಚೆ ಮೂಲಕ ಜಾರಿ ಮಾಡಿದ್ದರೂ ಹಾಜರಾಗಿರುವುದಿಲ್ಲವಾದ ಹಿನ್ನಲೆಯಲ್ಲಿ ಸದರಿಯವರಿಗೆ ಸರ್ಕಾರಿ ಸೇವೆಯಲ್ಲಿ ಮುಂದುವರೆಯಲು ಆಸಕ್ತಿ ಇಲ್ಲದಿರುವುದು ಕಂಡು ಬರುತ್ತದೆ.
ಆದ್ದರಿಂದ 15 ದಿನಗಳೊಳಗಾಗಿ ಶಾಲಾ ಕರ್ತವ್ಯಕ್ಕೆ ಹಾಜರಾಗಲು ಬಸವರಾಜು ಅವರಿಗೆ ಪ್ರಕಟಣೆ ಮೂಲಕ ಅಂತಿಮವಾಗಿ ತಿಳಿಸಿದೆ. ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಸಿ.ಸಿ.ಎ ನಿಯಮ 1957ರ ನಿಯಮದಡಿ ಸದರಿ ನೌಕರರನ್ನು ಸೇವೆಯಿಂದ ವಜಾ ಮಾಡಲು/ತೆಗೆದುಹಾಕಲು ಕ್ರಮ ಜರುಗಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಶಿಸ್ತುಪ್ರಾಧಿಕಾರಿ ಮನಮೋಹನ ಹೆಚ್.ಕೆ. ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4