ಕೊರಟಗೆರೆ : ಕೊರಟಗೆರೆ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರು ದೂರು ದಾಖಲಿಸಲು ಕಂಟ್ರೋಲ್ ರೂಂಗಳನ್ನು ತೆರೆಯಲಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ಕೆ. ತಿಳಿಸಿದ್ದಾರೆ.
ಅವರು ಪತ್ರಿಕಾ ಹೇಳಿಕೆ ನೀಡಿ ಕೊರಟಗೆರೆ ತಾಲ್ಲೂಕಿನಲ್ಲಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ತಕ್ಷಣ ಈ ಕಂಟ್ರೋಲ್ ರೂಂಗಳ ದೂರವಾಣಿಗಳಿಗೆ ಜನರು ಕರೆ ಮಾಡುವಂತೆ ಕೋರಿದ್ದಾರೆ.
ಕೊರಟಗೆರೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಭಾಗದ ಕುಡಿಯುವ ನೀರಿನ ಸಮಸ್ಯೆಗಳಿಗೆ ಕೊರಟಗೆರೆ ತಾಲ್ಲೂಕು ಪಂಚಾಯತಿ 08138–200527, ಪಟ್ಟಣ ಪ್ರದೇಶದ ನೀರಿನ ಸಮಸ್ಯೆಗಳಿಗೆ ಕೊರಟಗೆರೆ ಪಟ್ಟಣ ಪಂಚಾಯತಿ 08138– 295546, ಇದರೊಂದಿಗೆ ಕೊರಟಗೆರೆ ತಾಲ್ಲೂಕು ಕಛೇರಿ 08138– 232153 ಗೂ ಸಹ ಕರೆ ಮಾಡಿ ದೂರು ದಾಖಲಿಸಬಹುದು ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4