ತುಮಕೂರು: ಊರ್ಡಿಗೆರೆ ವಲಯದ ಮೈದಾಳ ಗ್ರಾಮದಲ್ಲಿ ಶಿರಡಿ ಸಾಯಿಬಾಬಾ ಅನಾಥಾಶ್ರಮ ಕಟ್ಟಡ ಕಾಮಗಾರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ವತಿಯಿಂದ ಎರಡು ಲಕ್ಷ ರೂಗಳ ಡಿ.ಡಿ.ಯನ್ನು ತುಮಕೂರು ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ರವರು ಕಮಿಟಿಯ ಸದಸ್ಯರಿಗೆ ಹಸ್ತಾಂತರ ಮಾಡಿದರು.
ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಉಮೇಶ್, ಉಪಾಧ್ಯಕ್ಷರಾದ ನರಸಿಂಹಮೂರ್ತಿ, ಪೂಜ್ಯರ ಅಭಿಮಾನಿಯಾದ ಬ್ಯಾತ ಸೋಮಣ್ಣ ನವರು ಗ್ರಾಮ ಪಂಚಾಯತಿ ಸದಸ್ಯರಾದ ಶೋಭಾ, ಬಂಡಿಹಳ್ಳಿ ರವಿ, ಮಲ್ಲಿಕಾರ್ಜುನಯ್ಯ, ತಾಲ್ಲೋಕು ಯೋಜನಾಧಿಕಾರಿಗಳಾದ ಪ್ರಭಾಕರ್ ರಾಮ್ ನಾಯಕ್, ವಲಯ ಮೇಲ್ವಿಚಾರಕರಾದ ಲೋಕೇಶ್ ಎಚ್.ಎಸ್. ಸೇವಾ ಪ್ರತಿನಿಧಿ ಸಿದ್ದಮ್ಮ ಹಾಗೂ ಗ್ರಾಮಸ್ಥರು ಹಾಜರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4