ತಿಪಟೂರು: ನಗರದ ಸಾರ್ವಜನಿಕ ಆಸ್ಪತ್ರೆ ಹಾಗೂ ಎನ್ಸಿಡಿ (NCD) ಕ್ಲಿನಿಕ್ ಇವರ ವತಿಯಿಂದ ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ವಿಶ್ವ ಕ್ಯಾನ್ಸರ್ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮುಖ್ಯ ವೈದ್ಯಾಧಿಕಾರಿ ಡಾ.ಪ್ರಹ್ಲಾದ್, ಕ್ಯಾನ್ಸರ್ ಕಾಯಿಲೆ ಇಂದು ಪ್ರಪಂಚದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕಾಯಿಲೆಯಾಗಿದ್ದು, ಸಾರ್ವಜನಿಕರು ಇದರ ಬಗ್ಗೆ ಅರಿವು ಮುಂಜಾಗ್ರತೆ ಪಡೆದುಕೊಳ್ಳುವುದು ಉತ್ತಮ, ಕ್ಯಾನ್ಸರ್ ತಪಾಸಣೆ ಮಧುಮೇಹ ಅಧಿಕ ರಕ್ತದೊತ್ತಡ ತಪಾಸಣೆಗಳು ಒಂದು ವಾರಗಳ ಕಾಲ ನಮ್ಮ ಆಸ್ಪತ್ರೆಯಲ್ಲಿ (ಸಪ್ತಾಹ) ಏರ್ಪಡಿಸಿದ್ದು, ಸಾರ್ವಜನಿಕರು ತಪಾಸಣೆ ಮಾಡಿಸಿಕೊಳ್ಳುವುದರ ಮೂಲಕ,ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಆಸ್ಪತ್ರೆಯ ವೈದ್ಯರುಗಳಾದ ಡಾ.ಸುರೇಶ್, ಡಾ.ರಕ್ಷಿತ್, ಡಾ. ಸ್ವಾಮಿ ಮತ್ತು ಡಾ.ವಿಜಯಕುಮಾರ್, ಸಿಬ್ಬಂದಿಗಳಾದ ರಾಘವ್, ಉಮೇಶ್ ಮತ್ತು ಆಪ್ತ ಸಮಾಲೋಚಕ ಶ್ರೀನಿವಾಸ್ ಸೇರಿದಂತೆ ಎನ್.ಸಿ.ಡಿ. ಸಿಬ್ಬಂದಿ ಮತ್ತು ಆಸ್ಪತ್ರೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ವರದಿ: ಆನಂದ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB