ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹುಲಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸುಮಾರು ಎರಡು ವರ್ಷ ವಯಸ್ಸಿನ ಗಂಡು ಚಿರತೆ ಅನೇಕ ದಿನಗಳಿಂದ ಸುತ್ತಮುತ್ತಲ ಗ್ರಾಮಸ್ಥರಲ್ಲಿ ಭೀತಿ ಉಂಟು ಮಾಡಿತು.
ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆಯು ಚಿರತೆಯನ್ನು ಸೆರೆ ಹಿಡಿಯಲು ಬೋನು ಇರಿಸಿತ್ತು. ಈ ಬೋನಿನಲ್ಲಿ ಚಿರತೆ ಸೆರೆಯಾಗಿದೆ. ಈ ಮೂಲಕ ಈ ಪ್ರದೇಶದ ಜನರು ಚಿರತೆ ಭಯದಿಂದ ಮುಕ್ತರಾಗಿ ನಿಟ್ಟುಸಿರು ಬಿಟ್ಟಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4