ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಮನಗರದ ಬಿಡದಿಯಲ್ಲಿ ಮಾಡಿಕೊಂಡಿರುವ ಒತ್ತುವರಿಯನ್ನು ಕೋರ್ಟ್ ಆದೇಶದಂತೆ ಕಂದಾಯ ಇಲಾಖೆ ಒತ್ತುವರಿ ತೆರವು ಮಾಡಲು ಮುಂದಾಗಿದೆ.
ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ.
ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ ಐಟಿ ರಚನೆ ಮಾಡಿಕೊಂಡಿತ್ತು ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿ ಬಂದಿತ್ತು.
14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು.
ಈ ಹಿನ್ನೆಲೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಇಂದು ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4


