ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿ ಆಕೆಯ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೆಗಡೆನಗರದ 1ನೇ ಮುಖ್ಯರಸ್ತೆ ನಿವಾಸಿ ವಲ್ಲರಮತಿ(35) ಕೊಲೆಯಾದ ಮಹಿಳೆಯಾಗಿದ್ದು, ಇವರು 13 ವರ್ಷಗಳ ಹಿಂದೆ ಮೂಲತಃ ತಮಿಳುನಾಡಿನವರಾದ ವಲ್ಲರ ಮತಿ ಹಾಗೂ ಚಂದ್ರಶೇಖರ್ ಮದುವೆಯಾಗಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ.
ವಲ್ಲರಮತಿ ಖಾಸಗಿ ಕಂಪನಿಯೊಂದರಲ್ಲಿ ಅಕೌಂಟೆಂಟ್ ವೃತ್ತಿ ಮಾಡುತ್ತಿದ್ದರು. ಪತಿ ಚಂದ್ರಶೇಖರ್ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು.
ಪತ್ನಿಯ ನಡತೆಯ ಬಗ್ಗೆ ಚಂದ್ರಶೇಖರ್ ಅನುಮಾನಗೊಂಡು ಆಗಾಗ್ಗೆ ಜಗಳವಾಡುತ್ತಿದ್ದನು. ನಿನ್ನೆಯೂ ಬೆಳಗ್ಗೆ 9:30ರ ಸುಮಾರಿಗೆ ಪತ್ನಿಯ ಜೊತೆಗೆ ಜಗಳ ನಡೆದಿದ್ದು, ಈ ವೇಳೆ ಪತಿಯು ಪತ್ನಿಯ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದು, ಬಳಿಕ ಪೊಲೀಸರಿಗೆ ವಿಚಾರ ತಿಳಿಸಿದ್ದಾನೆ.ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4