nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ
    • ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್
    • ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
    • ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
    • ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
    • ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್: ನೀರಿನ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಶಾಸಕ ಪ್ರಭು ಚವ್ಹಾಣ್ ಸೂಚನೆ
    ಜಿಲ್ಲಾ ಸುದ್ದಿ March 27, 2025

    ಬೀದರ್: ನೀರಿನ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಶಾಸಕ ಪ್ರಭು ಚವ್ಹಾಣ್ ಸೂಚನೆ

    By adminMarch 27, 2025No Comments2 Mins Read
    prabhu chavan

    Provided by
    Provided by

    ಬೀದರ್ : ಬೇಸಿಗೆಯ ತೀವ್ರತೆ ಹೆಚ್ಚುತ್ತಿದ್ದಂತೆ ಔರಾದ್ (ಬಿ) ಹಾಗೂ ಕಮಲನಗರ ತಾಲ್ಲೂಕಿನ ಸಾಕಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

    ಔರಾದ(ಬಿ) ತಾಲ್ಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು.

    ನೀರಿನ ಸಮಸ್ಯೆಯ ಕುರಿತು ಪಂಚಾಯತ್‌ ಅಧಿಕಾರಿಗಳಿಂದ ಗ್ರಾಮವಾರು ಮಾಹಿತಿ ಪಡೆದ ಅವರು, ಪ್ರತಿದಿನ ಒಂದಿಲ್ಲೊಂದು ಗ್ರಾಮದ ಜನರು ನೀರಿನ ಸಮಸ್ಯೆ ಹೇಳಿಕೊಂಡು ಬರುತ್ತಿದ್ದಾರೆ. ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿವೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯವಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಖಾಸಗಿ ಬೋರವೆಲ್ ಇಲ್ಲವೇ ಹೊಸ ಬೋರ್‌ವೆಲ್ ಕೊರೆಸಿ ನೀರು ಸರಬರಾಜು ಮಾಡಬೇಕು. ಸಾಧ್ಯವಾದಷ್ಟು ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸಬೇಕು. ಸಮಸ್ಯೆಯ ತೀವ್ರತೆ ಹೆಚ್ಚಿರುವ ಗ್ರಾಮಗಳಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಪೂರೈಸಲು ಆದ್ಯತೆ ಕೊಡಬೇಕು ಎಂದು ಹೇಳಿದರು.

    ಇನ್ನು ಎರಡು ತಿಂಗಳು ನೀರಿನ ಸಮಸ್ಯೆ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಒಳಗೊಂಡು ಎಲ್ಲ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಾಲ್ಲೂಕು ಕೇಂದ್ರದಲ್ಲಿ ವಾಸ್ತವ್ಯ ಮಾಡಬೇಕು. ಎಲ್ಲರೂ ತಮ್ಮ ಮೊಬೈಲ್ ಫೋನ್ ಗಳು ಚಾಲ್ತಿಯಲ್ಲಿಡಬೇಕು. ಸಾರ್ವಜನಿಕರ ಕರೆಗಳಿಗೆ ತಕ್ಷಣ ಸ್ಪಂದಿಸಬೇಕು. ಸಣ್ಣಪುಟ್ಟ ಸಮಸ್ಯೆಗಳಿದ್ದಲ್ಲಿ ತಕ್ಷಣ ಸರಿಪಡಿಸಬೇಕು. ಎಲ್ಲಿಯೂ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

    ಬಿಲ್ ಪಾವತಿಯಲ್ಲಿ ಲೋಪ, ಅಧಿಕಾರಿಗಳಿಗೆ ತರಾಟೆ:

    ಜಲ ಜೀವನ್ ಮಿಷನ್ ಯೋಜನೆ (ಜೆಜೆಎಂ) ಅಡಿ ಬಿಲ್ ಪಾವತಿಗೆ ಸಂಬಂಧಿಸಿದಂತೆ ಕಡಿಮೆ ಕೆಲಸವಾದರೂ ಗುತ್ತಿಗೆದಾರರಿಗೆ ಹೆಚ್ಚಿನ ಬಿಲ್ ಪಾವತಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳಿಗೆ ಶಾಸಕರು ತೀವ್ರ ತರಾಟೆಗೆ ತೆಗೆದುಕೊಂಡರು.

    ಖೇರ್ಡಾ(ಬಿ) ಗ್ರಾಮದಲ್ಲಿ ಶೇ.30ರಷ್ಟು ಮಾತ್ರ ಕೆಲಸವಾಗಿದ್ದು, ಶೇ.70ರಷ್ಟು ಬಿಲ್ ಪಾವತಿಸಲಾಗಿದೆ. ಸಾವರಗಾಂವ ಗ್ರಾಮದಲ್ಲಿ ಶೇ.40ರಷ್ಟು ಕೆಲಸವಾದರೆ, ಶೇ.60ರಷ್ಟು ಬಿಲ್ ಪಾವತಿಸಲಾಗಿದೆ. ಅದರಂತೆ ಹುಲ್ಯಾಳ್, ಬಾವಲಗಾಂವ್, ಹೊಕ್ರಾಣಾ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಕೆಲಸ ಕಡಿಮೆಯಾದರೂ ಹೆಚ್ಚಿನ ಬಿಲ್ ಪಾವತಿಸಿರುವುದನ್ನು ಗಮನಕ್ಕೆ ಬರುತ್ತಿದ್ದಂತೆ ಶಾಸಕರು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾದರು.

    ಅಧಿಕಾರಿಗಳು ಹೀಗೆ ಮಾಡುವುದರಿಂದಲೇ ಯೋಜನೆ ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಸಂಬಂಧಪಟ್ಟ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಕಿಡಿಕಾರಿದರು.

    ಈ ಸಂದರ್ಭದಲ್ಲಿ ಔರಾದ್‌ (ಬಿ) ತಹಶೀಲ್ದಾರ್ ಮಲಶೆಟ್ಟಿ ಚಿದ್ರೆ, ಕಮಲನಗರ್ ತಹಶೀಲ್ದಾರ್‌ ಅಮಿತಕುಮಾರ್ ಕುಲಕರ್ಣಿ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ್ ಪಾಟೀಲ್, ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಮಾಣಿಕರಾವ್ ಕೆರೂರ್, ಜೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿ ಕಾರಭಾರಿ ಹಾಗೂ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸ್ವಾಮಿದಾಸ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲಿಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ

    June 18, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್: ಕರ್ತವ್ಯ ಲೋಪ, ದುರ್ನಡತೆ ಆರೋಪ; ಒಂದೇ ದಿನ ಇಬ್ಬರು ಪಿಡಿಒ ಅಮಾನತು!

    June 19, 2026

    ಬೀದರ್: ಜಿಲ್ಲೆಯಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಮತ್ತು ದುರ್ನಡತೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಒಂದೇ ದಿನ ಇಬ್ಬರು ಪಂಚಾಯತ್ ಅಭಿವೃದ್ಧಿ…

    ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ

    June 19, 2026

    ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ:  ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ

    June 19, 2026

    ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್

    June 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.