ತುಮಕೂರು: ಗಣರಾಜ್ಯೋತ್ಸವದ ವೇಳೆ ಅಂಬೇಡ್ಕರ್ ಫೋಟೋ ತೆಗೆಸಿ, ಉದ್ಧಟತನದ ವರ್ತನೆ ತೋರಿದ ರಾಯಚೂರು ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ ಸೋಮವಾರ ಬೃಹತ್ ಪ್ರತಿಭಟನೆಗೆ ಕರೆ ನೀಡಲಾಗಿದೆ.
ಫೆ.7ರಂದು ಬೆಳಗ್ಗೆ 10:30ಕ್ಕೆ ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಎಂ.ಜಿ. ರಸ್ತೆಯ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ ಮೂಲಕ ಪ್ರತಿಭಟನೆ ನಡೆಸಲಾಗುವುದು ಎಂದು ಸಂವಿಧಾನ ಪರ ಸಂಘಟನೆಗಳ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಬೃಹತ್ ಪ್ರತಿಭಟನೆಯಲ್ಲಿ ಸಂವಿಧಾನ ಆಶಯಗಳನ್ನು ಒಪ್ಪಿರುವ ಭವಿಷ್ಯದ ಪ್ರಜೆಗಳಾಗಿ ರೊಪುಗೂಳ್ಳುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖಂಡರು ಇದೇ ವೇಳೆ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB