nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026
    Facebook Twitter Instagram
    ಟ್ರೆಂಡಿಂಗ್
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    • ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ
    • ಪಾವಗಡ: ಸಕಾಲಕ್ಕೆ ಸಿಗದ ಚಿಕಿತ್ಸೆ; ಹಾವು ಕಚ್ಚಿ ಬಿ.ಫಾರ್ಮಸಿ ವಿದ್ಯಾರ್ಥಿ ದುರ್ಮರಣ
    • ಐದು ಕೋಟಿ ವೆಚ್ಚದ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಗುದ್ದಲಿ ಪೂಜೆ
    • ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು
    • KCET–2026ರಲ್ಲಿ ಸುಭಾಷ್ ವಿಜ್ಞಾನ ಪದವಿ ಪೂರ್ವ ಕಾಲೇಜಿಗೆ ಕೊರಟಗೆರೆ ತಾಲೂಕು ಪ್ರಥಮ ಸ್ಥಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಬಾಬು ಜಗಜೀವನರಾಂ ವೃತ್ತ ಅಭಿವೃದ್ಧಿಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
    ತುಮಕೂರು April 7, 2025

    ಡಾ.ಬಾಬು ಜಗಜೀವನರಾಂ ವೃತ್ತ ಅಭಿವೃದ್ಧಿಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

    By adminApril 7, 2025No Comments3 Mins Read
    Dr Babu Jagjivanram

    ತುಮಕೂರು: ನಗರದ ಕೋತಿ ತೋಪು ಪ್ರದೇಶದಲ್ಲಿರುವ ಡಾ.ಬಾಬು ಜಗಜೀವನರಾಂ ವೃತ್ತದ ಅಭಿವೃದ್ಧಿಗೆ ಈಗಾಗಲೇ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಬಾಬು ಜಗಜೀವನರಾಂ ಅವರ 118ನೇ ಜಯಂತಿ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಿಕ ಸಭಾಂಗಣದಲ್ಲಿ ಶನಿವಾರ ಬಾಬೂಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನಗರದ ಕೋತಿತೋಪು ಪ್ರದೇಶದಲ್ಲಿ ಬಾಬು ಜಗಜೀವನರಾಂ ವೃತ್ತವನ್ನು ಅಭಿವೃದ್ಧಿಪಡಿಸಲು ಪಾಲಿಕೆ ಈಗಾಗಲೇ ಕಾರ್ಯಗತವಾಗಿದೆ. ಬಾಬು ಜಗಜೀವನರಾಂ ಭವನ ನಿರ್ಮಾಣಕ್ಕೂ ಸರ್ಕಾರದಿಂದ ಉತ್ತಮ ಸ್ಪಂದನೆ ದೊರೆತಿದ್ದು, ಶೀಘ್ರದಲ್ಲಿಯೇ ಭವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲು ಜಿಲ್ಲಾಡಳಿತ ಅಣಿಯಾಗುತ್ತಿದೆ ಎಂದು ತಿಳಿಸಿದರು.


    Provided by
    Provided by

    ಡಾ.ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನರಾಂ ಅವರಂತಹ ಮಹನೀಯರ ಮಾರ್ಗದಲ್ಲಿ ನಾವು ನಡೆಯಬೇಕು. ತಳ ಸಮುದಾಯಗಳಿಗಾಗಿ ಅವರ ಶ್ರಮವನ್ನು ಸ್ಮರಿಸಬೇಕು. ಹಿಂದುಳಿದ, ದಲಿತ, ಮಹಿಳೆಯರು, ಮಕ್ಕಳು, ರೈತ ಸಮುದಾಯ ಅಭಿವೃದ್ಧಿಯಾಗಬೇಕೆಂಬ ಅವರ ಮಹದಾಸೆಯನ್ನು ನಾವೆಲ್ಲ ಒಟ್ಟಾಗಿ ಈಡೇರಿಸುವ ಪ್ರಯತ್ನ ಮಾಡಬೇಕೆಂದರಲ್ಲದೆ, ಜಗಜೀವನರಾಂ ಅವರ ಆಶಯದಂತೆ ಜಿಲ್ಲಾಡಳಿತದಿಂದ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

    ಬಾಬೂಜಿ ಅವರು ತಮಗೆ ದೊರೆಯದ ಸೌಲಭ್ಯಗಳು ಇತರರಿಗೂ ವಿಶೇಷವಾಗಿ ದಲಿತರು ಹಾಗೂ ಬಡವರಿಗೆ ದೊರಕಿಸಬೇಕೆಂಬ ನಿಟ್ಟಿನಲ್ಲಿ ಹೋರಾಡಿದರು. ಅವರ ಆಡಳಿತಾವಧಿಯಲ್ಲಿ ದೀನ ದಲಿತರ ಬದುಕನ್ನು ಸುಧಾರಿಸುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ರೂಪಿಸಿ ಜಾರಿಗೆ ತಂದರು. ಅವರ ಆದರ್ಶಗಳು, ವಿಚಾರಧಾರೆಗಳು ಇಂದಿಗೂ ಪ್ರೇರಣೆಯಾಗಿವೆ ಎಂದು ತಿಳಿಸಿದರು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಭಾರತದ ಇತಿಹಾಸದಲ್ಲಿ ಬಾಬೂಜಿ ಅವರು ಕೃಷಿ, ರೈಲ್ವೆ, ಕಾರ್ಮಿಕ, ರಕ್ಷಣಾ, ಸಾರಿಗೆ ಸೇರಿದಂತೆ ವಿವಿಧ ಖಾತೆಗಳ ಕೇಂದ್ರ ಸಚಿವರಾಗಿ, ಉಪ ಪ್ರಧಾನಿಯಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ದಾಖಲೆಯನ್ನು ಹೊಂದಿದ್ದಾರೆ. “ಆಡು ಮುಟ್ಟದ ಸೊಪ್ಪಿಲ್ಲ” ಎಂಬಂತೆ ಸುಮಾರು 30 ವರ್ಷಗಳ ಕಾಲ ವಿವಿಧ ಇಲಾಖೆಗಳ ಖಾತೆಗಳನ್ನು ನಿರ್ವಹಿಸಿ ಸದೃಢ ಆಡಳಿತ ನೀಡಿದ ಧೀಮಂತ ವ್ಯಕ್ತಿಯಾಗಿದ್ದರು ಎಂದು ತಿಳಿಸಿದರು.

    ದೇಶದಲ್ಲಿ ಬರಗಾಲ ಸಮಯದಲ್ಲಿ ಉದ್ಭವಿಸಿದ್ದ ಆಹಾರದ ಬಿಕ್ಕಟ್ಟನ್ನು ನಿಭಾಯಿಸಿದರು. ಹಸಿರುಕ್ರಾಂತಿ ಮೂಲಕ ಭಾರತದ ಕೃಷಿಯನ್ನು ಆಧುನೀಕರಿಸುವಲ್ಲಿ ಅವರ ಕೊಡುಗೆ ಅಪಾರವಾಗಿದೆ. ದಲಿತರ ಸಮಾನತೆ ಸಾಧಿಸಲು ತಮ್ಮನ್ನು ತಾವು ಸಮರ್ಪಿಸಿಕೊಂಡಿದ್ದರು. ಅವರ ನಡೆ ನಮಗೆಲ್ಲ ಆದರ್ಶವಾಗಬೇಕು. ತಳ ಸಮುದಾಯದವರನ್ನು ಮೇಲೆತ್ತುವ ಅವರ ಕಳಕಳಿ ಮೆಚ್ಚುವಂತಹದ್ದು ಎಂದು ಬಣ್ಣಿಸಿದರು.

    ಮೂಲಭೂತ ಶಿಕ್ಷಣ ವ್ಯವಸ್ಥೆಗೆ ಅವರ ಮೊದಲ ಆದ್ಯತೆಯಾಗಿತ್ತು. ಈ ನಿಟ್ಟಿನಲ್ಲಿ ಮಕ್ಕಳಿಗೆ ಮೂಲಭೂತ ಶಿಕ್ಷಣ ನೀಡಲು ಸರ್ಕಾರದಿಂದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಹಲವಾರು ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳನ್ನು ಹಿಂದಿಕ್ಕಿ ಸರ್ಕಾರಿ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಉತ್ತೀರ್ಣರಾಗುತ್ತಿದ್ದಾರೆ ಎಂದು ತಿಳಿಸಿದರಲ್ಲದೆ, ಬಾಬೂಜಿ ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಸಂಕಲ್ಪ ಮಾಡುವ ಮೂಲಕ ಅವರ ಜಯಂತಿ ಸುದಿನಕ್ಕೆ ಕೊಡುಗೆಯಾಗಿ ನೀಡಬೇಕು ಎಂದು ತಿಳಿಸಿದರು.

    ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಮಾತನಾಡಿ, ಹಿಂದುಳಿದ ವರ್ಗಗಳ ಏಳಿಗೆಯೊಂದಿಗೆ ಕಾರ್ಮಿಕರ ಶ್ರೇಯೋಭಿವೃದ್ಧಿಯೂ ಬಾಬೂಜಿಯವರ ಮೂಲ ಮಂತ್ರವಾಗಿತ್ತು. ಕಾರ್ಮಿಕರಿಗೆ ಕನಿಷ್ಠ ವೇತನ ಪಾವತಿ, ಕರ್ತವ್ಯದ ಅವಧಿ ನಿಗಧಿ ಬಗ್ಗೆ ಕಾಳಜಿ ಹೊಂದಿದ್ದರು. ಕಾರ್ಮಿಕರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ರೂಪಿಸಿದ್ದರು ಎಂದು ತಿಳಿಸಿದರಲ್ಲದೆ, ಪಾಲಿಕೆಯಲ್ಲಿಯೂ ಸಹ ಕಾರ್ಮಿಕರ ಕುಟುಂಬಗಳಿಗೆ ಸಾಲ ಒದಗಿಸುವುದು, ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ಸೇರಿದಂತೆ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಮಾತನಾಡಿ, ಸಾರ್ಥಕವಾಗಿ ಬದುಕಿ ತಳಸಮುದಾಯದವರ ಏಳಿಗೆಗಾಗಿ ಶ್ರಮಿಸುವ ಮೂಲಕ ತಮ್ಮ ಧ್ಯೆಯೋದ್ದೇಶಗಳನ್ನು ಮುಂದಿನ ಪೀಳಿಗೆಗಾಗಿ ಬಿಟ್ಟು ಹೋಗಿರುವವರಲ್ಲಿ ಬಾಬೂಜಿಯವರೂ ಒಬ್ಬರಾಗಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಮೀಸಲಾತಿ ಇಲ್ಲದ ಅವಧಿಯಲ್ಲಿ ಶಿಕ್ಷಣ ಪಡೆದು ಸಮಾಜದ ಕಟ್ಟಕಡೆಯ ವ್ಯಕ್ತಿಯಾಗಿದ್ದರೂ ಉಪಪ್ರಧಾನಿಯಂತಹ ಉನ್ನತ ಸ್ಥಾನಕ್ಕೆ ಏರಿದ ಛಲಗಾರ. ಪ್ರತಿಯೊಬ್ಬರೂ ತಮ್ಮಲ್ಲಿಯ ಬುದ್ಧಿಶಕ್ತಿಯನ್ನು ಉಪಯೋಗಿಸಿ ಸಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಂಡು ಬಾಬೂಜಿ ಅವರ ಹಾದಿಯಲ್ಲಿ ಸಾಗಿದರೆ ಗೆಲುವು ನಿಶ್ಚಿತವೆಂದು ತಿಳಿಸಿದರು.

    ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಂಜೀವಪ್ಪ, ತಹಶೀಲ್ದಾರ್ ರಾಜೇಶ್ವರಿ, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ದಲಿತ ಮುಖಂಡರು, ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

     

    admin
    • Website

    Related Posts

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ತುಮಕೂರು: UGD ಓಪನ್ ಆಗಿ ಸಾರ್ವಜನಿಕರಿಗೆ ತೊಂದರೆ, ಪಾಲಿಕೆ ಮೌನ

    June 12, 2026

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ

    June 12, 2026

    ಮಂತ್ರಾಲಯ:  ಇಲ್ಲಿನ ಪ್ರಸಿದ್ಧ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಇದೇ ಜೂನ್ 26ರಂದು ಅತ್ಯಂತ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿರುವ “ರಾಯರ…

    ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!

    June 12, 2026

    ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ

    June 12, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.