ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಇಂದು ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಗೆ ವಿಚಾರಣೆ ಹಾಜರಾಗಬೇಕಿತ್ತು. ಆದರೆ, ಅವರು ವಿಚಾರಣೆಗೆ ಹಾಜರಾಗದ ಹಿನ್ನೆಲೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ವಿಚಾರಣೆ ಸಂದರ್ಭದಲ್ಲಿ ವಕೀಲರು, ದರ್ಶನ್ ಅವರಿಗೆ ಬೆನ್ನು ನೋವಿದೆ. ಹೀಗಾಗಿ ವಿಚಾರಣೆಗೆ ಬರಲು ವಿನಾಯಿತಿ ಕೋರಿದರು. ಈ ವೇಳೆ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಾಧೀಶರು, ವಿಚಾರಣೆಗೆ ಆರೋಪಿಗಳು ಗೈರಾಗುವುದು ಸರಿಯಲ್ಲ. ವಿಚಾರಣೆಗೆ ಇದ್ದಾಗ ಆರೋಪಿಗಳು ಹಾಜರಾಗಲೇಬೇಕು. ವಿನಾಯಿತಿಗೆ ಮನವಿ ಮಾಡುವುದು ಸರಿಯಲ್ಲ ಎಂದರು.
ವಿಚಾರಣೆ ವೇಳೆ ದರ್ಶನ್ ಪರ ವಕೀಲರು, ದರ್ಶನ್ ಮನೆಯಿಂದ ಜಪ್ತಿ ಮಾಡಿಕೊಂಡಿದ್ದ 75 ಲಕ್ಷ ರೂ. ಹಣವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಈ ವೇಳೆ ಕೋರ್ಟ್, ಆದಾಯ ತೆರಿಗೆ ಇಲಾಖೆ ವಾದ ಮಂಡಿಸಿದ ಬಳಿಕ ಆದೇಶ ನೀಡುವುದಾಗಿ ಹೇಳಿ ಮೇ 20ಕ್ಕೆ ವಿಚಾರಣೆಯನ್ನು ಮುಂದೂಡಿಕೆ ಮಾಡಿತು. ಈ ವೇಳೆ ತನಿಖೆ ವೇಳೆ ಜಪ್ತಿ ಮಾಡಿದ್ದ ಮೊಬೈಲ್ಗಳ ಹಿಂತಿರುಗಿಸಲು ಆರೋಪಿಗಳ ಪರ ವಕೀಲರು ಅರ್ಜಿ ಸಲ್ಲಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KN8LiGgEw492Ijygqm0dVW
————————————