ಸಿಂಗಾಪುರ: ಆಂಧ್ರಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಕಿರಿಯ ಪುತ್ರ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಓದುತ್ತಿರುವ ಸಿಂಗಾಪುರ ಶಾಲೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಈ ಅವಘಡದಲ್ಲಿ ಮಾರ್ಕ್ ಗೆ ಗಂಭೀರವಾಗಿ ಗಾಯಗಳಾಗಿವೆ. ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾರ್ಕ್ ನ ಕೈ, ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ನುಗ್ಗಿ ತೀವ್ರ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KN8LiGgEw492Ijygqm0dVW
————————————