nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026
    Facebook Twitter Instagram
    ಟ್ರೆಂಡಿಂಗ್
    • ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ
    • ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು
    • ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ
    • ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ
    • ಪಾವಗಡ: ರಾಮಕೃಷ್ಣ ಸೇವಾಶ್ರಮದಿಂದ ಮೇವು ವಿತರಣೆ
    • ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ
    • ಶಿರಾದ ಸಪ್ತಗಿರಿ ಬಡಾವಣೆಯಲ್ಲಿ ಶಿಥಿಲಗೊಂಡ ವಿದ್ಯುತ್ ಕಂಬ: ಕೂಡಲೇ ಬದಲಿಸಲು ಸಾರ್ವಜನಿಕರ ಒತ್ತಾಯ
    • ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುಮಕೂರು: ಸುಧಾರಿಸಿದ ದ್ವಿತೀಯ ಪಿಯುಸಿ ಫಲಿತಾಂಶ
    ತುಮಕೂರು April 8, 2025

    ತುಮಕೂರು: ಸುಧಾರಿಸಿದ ದ್ವಿತೀಯ ಪಿಯುಸಿ ಫಲಿತಾಂಶ

    By adminApril 8, 2025No Comments2 Mins Read
    exam results

    ತುಮಕೂರು : ಜಿಲ್ಲೆಯ ದ್ವಿತೀಯ ಪಿಯುಸಿ ಫಲಿತಾಂಶ ಸುದಾರಣೆ ಕಂಡು ಬಂದಿದ್ದು,  ಕಳೆದ ವರ್ಷ 24ನೇ ಸ್ಥಾನದಲ್ಲಿದ್ದ ಜಿಲ್ಲಾ ಫಲಿತಾಂಶ ಈ ವರ್ಷ 18 ಸ್ಥಾನಕ್ಕೆ ಜಿಗಿದಿದ್ದು, ಫಲಿತಾಂಶ  ತೃಪ್ತಿದಾಯಕವಾಗಿದೆ ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಬಾಲಗುರುಮೂರ್ತಿ ತಿಳಿಸಿದರು.

    ಜಿಲ್ಲೆಯಲ್ಲಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ಶ್ರಮ ಹಾಗೂ ಇಲಾಖೆಯ ಕಾರ್ಯವೈಖರಿಯಿಂದ ಈ ವರ್ಷ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು ಎಂದು ತಿಳಿಸಿದರು. ಈ ವರ್ಷದ ಫೆಬ್ರವರಿ ತಿಂಗಳಲ್ಲಿ ಇಂಗ್ಲಿಷ್ ಭಾಷೆಯ ಕ್ಲಿಸ್ಟತೆಯನ್ನು ಹೋಗಲಾಡಿಸುವ ದೃಷ್ಟಿಯಿಂದ ಸುಮಾರು 6 ಶನಿವಾರ ವಿಶೇಷ ಉಪನ್ಯಾಸಕರನ್ನು ಒಳಗೊಂಡಂತೆ ಜಿಲ್ಲೆಯಾದ್ಯಂತ ನೋಡಲ್ ಕೇಂದ್ರಗಳಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮಗಳು ನಡೆದವು. ಅಲ್ಲದೆ ಉನ್ನತ ಶ್ರೇಣಿಯ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಉಪನ್ಯಾಸ ಕಾರ್ಯಾಗಾರಗಳಿಂದ ಜಿಲ್ಲೆಯಲ್ಲಿ ಫಲಿತಾಂಶ ಸುಧಾರಣೆಗೆ ಕಾರಣವಾಯಿತು ಎಂದು ತಿಳಿಸಿದರು.


    Provided by
    Provided by

    ದ್ವಿತೀಯ ಪಿಯುಸಿ ಫಲಿತಾಂಶವನ್ನು ಕುರಿತು ಮಾಹಿತಿ ನೀಡಿದ ಅವರು,  ಜಿಲ್ಲೆಯಲ್ಲಿ ಒಟ್ಟಾರೆ ಕಲಾ ವಿಭಾಗದಲ್ಲಿ 4,318 ವಿದ್ಯಾರ್ಥಿಗಳಿಗೆ 2476, ವಿಜ್ಞಾನ ವಿಭಾಗದಲ್ಲಿ 10,051 ವಿದ್ಯಾರ್ಥಿಗಳಿಗೆ 7,784 ಹಾಗೂ ವಾಣಿಜ್ಯ ವಿಭಾಗದಲ್ಲಿ 8,587 ವಿದ್ಯಾರ್ಥಿಗಳಿಗೆ 6,274 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಒಟ್ಟಾರೆ ಫಲಿತಾಂಶದಂತೆ 22,956 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಅದರಲ್ಲಿ 16,534 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರು:

    ಕಲಾ ವಿಭಾಗ:

    ತುಮಕೂರು ಎಂಪ್ರೆಸ್ ಬಾಲಕಿಯರ ಸರ್ಕಾರಿ ಪದವಿ ಪೂರ್ವ  ಕಾಲೇಜಿನ ಅದಿತಿ ಎಚ್ 584 ಅಂಕಗಳು ಪ್ರಥಮ ಸ್ಥಾನ.

    ತಿಪಟೂರು ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಗಣೇಶ್ 580 ಅಂಕಗಳು ದ್ವಿತೀಯ ಸ್ಥಾನ.

    ತಿಪಟೂರು ಬಸವೇಶ್ವರ ಪದವಿ ಪೂರ್ವ ಕಾಲೇಜಿನ ಚೇತನ್  ಬಿ.ಆರ್. 579

    ವಾಣಿಜ್ಯ ವಿಭಾಗ:

    ರಾಜ್ಯಕ್ಕೆ 4 ನೇ ಸ್ಥಾನ ಪಡೆದಿರುವ ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಶ್ರೀ ಲಕ್ಷ್ಮಿ ಆರ್ 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

    ಇದೇ ಕಾಲೇಜಿನ ಎಸ್ ಎನ್ ಲಕ್ಷ್ಮಿ 593 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದಿದ್ದಾರೆ.

    ಇದೇ ಕಾಲೇಜಿನ ಎಚ್.ಎನ್. ಭುವನ್ ಹಾಗೂ ಜಮುನಾ ಎಸ್.ಜೆ. 592 ಅಂಕಗಳನ್ನು ಪಡೆದು ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ.

    ವಿಜ್ಞಾನ ವಿಭಾಗ:

    ಚಿಕ್ಕನಾಯಕನಹಳ್ಳಿ ವಿದ್ಯಾ ವಾರಿಧಿ ಪದವಿ ಪೂರ್ವ ಕಾಲೇಜಿನ ಆದಿತ್ಯ ಎಚ್.ಎಸ್. 594 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದಿದ್ದು, ಶಾರದಂಬ ಪದವಿ ಪೂರ್ವ ಕಾಲೇಜಿನ ಕೀರ್ತನಾ ಎಂ.ಎಸ್. ಹಾಗೂ ವಿಧ್ಯಾನಿಧಿ ಕಾಲೇಜಿನ ಶಿವಾನಿ ಎಸ್.ರೈ  593 ಅಂಕಗಳನ್ನು ಪಡೆದ ದ್ವಿತೀಯ ಸ್ಥಾನ ಪಡೆದಿದ್ದಾರೆ

    ತಿಪಟೂರಿನ ಎಸ್.ಎಸ್.ಪದವಿ ಪೂರ್ವ ಕಾಲೇಜಿನ ಹರ್ ಪ್ರೀತ್ ಏ ಹಾಗೂ ವಿದ್ಯಾನಿಧಿ ಕಾಲೇಜಿನ ನಿತೀಶ್ ಕೆ.ಪಿ. 591 ಅಂಕಗಳನ್ನು ಪಡೆದು ತೃತೀಯ ಸ್ಥಾನ ಹಂಚಿಕೊಂಡಿದ್ದಾರೆ.

    ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬರಲು ಜಿಲ್ಲಾ ಉಪನಿರ್ದೇಶಕರ ಶಿಸ್ತುಬದ್ಧ ಆಡಳಿತವೇ ಕಾರಣ ಎಂದು ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರಭಾಕರ್ ರೆಡ್ಡಿ ತಿಳಿಸಿದರು.

    ಉಪನಿರ್ದೇಶಕರ ಕಾರ್ಯಶೀಲತೆ, ದಕ್ಷ ಆಡಳಿತ, ಮತ್ತು ಶಿಸ್ತುಬದ್ಧ ಶೈಕ್ಷಣಿಕ ಚಟುವಟಿಕೆ ಹಾಗೂ ಜಿಲ್ಲೆಯ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಶ್ರಮದಿಂದ ತುಮಕೂರು ಜಿಲ್ಲೆಗೆ ಉತ್ತಮ ಫಲಿತಾಂಶ ಬರಲು ಸಾಧ್ಯವಾಯಿತು.

    — ಎನ್.ಮಹಾಲಿಂಗೇಶ್, ಜಿಲ್ಲಾ  ಉಪನ್ಯಾಸಕರ ಸಂಘದ ಅಧ್ಯಕ್ಷ, ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಕುಣಿಗಲ್: ದಲಿತ ಮುಖಂಡರುಗಳೊಂದಿಗೆ ಕುಂದುಕೊರತೆ ಸಭೆ

    April 9, 2026

    ತುಮಕೂರು ಜನತಾ ದರ್ಶನದಲ್ಲೇ ಅವ್ಯವಸ್ಥೆಯ ದರ್ಶನ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಚಿವ ಪರಮೇಶ್ವರ್ ಗರಂ, ದೂರುಗಳ ರಾಶಿ

    April 9, 2026

    Comments are closed.

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ

    April 10, 2026

    ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ…

    ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ: ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

    April 9, 2026

    ತುಮಕೂರು: ಹಣದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗನಿಗೆ ಜೀವಾವಧಿ ಶಿಕ್ಷೆ

    April 9, 2026

    ಶಿರಾದ ಹೊನ್ನೇನಹಳ್ಳಿಯಲ್ಲಿ ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪ್ರತಿಭಟನೆ; ಕೊಳವೆಬಾವಿ ಕೊರೆಯುವ ವಾಹನ ತಡೆದು ಆಕ್ರೋಶ

    April 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.