nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ
    • ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ
    • ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ
    • ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ
    • ಹೇಮಾವತಿ ನೀರಿಗಾಗಿ ಅನಿರ್ದಿಷ್ಟಾವಧಿ ಸತ್ಯಾಗ್ರಹ : ಅಹೋರಾತ್ರಿ ಧರಣಿ ಆರಂಭ!
    • ಮಾನವ ಕಳ್ಳಸಾಗಾಣಿಕೆ ಸಮಾಜಕ್ಕೆ ಮಾರಕ: ಉಚಿತ ಕಾನೂನು ಸೇವೆಗಳ ಸದುಪಯೋಗಕ್ಕೆ ನ್ಯಾಯಾಧೀಶೆ ಸುಷ್ಮಾ ಎಂ. ಕರೆ
    • ಔರಾದ್: ಕಲುಷಿತ ನೀರು ಸರಬರಾಜಾಗದಂತೆ ಮುಂಜಾಗ್ರತೆ ವಹಿಸಿ: ಇಒ ಕಿರಣ ಪಾಟೀಲ್ ಸೂಚನೆ
    • ಗಡಿ ಚೆಕ್‌ ಪೋಸ್ಟ್‌ ಗಳಲ್ಲಿ ಕಟ್ಟೆಚ್ಚರ ವಹಿಸಿ: ಡಿವೈಎಸ್‌ ಪಿ ಬಲ್ಲಪ್ಪ ನಂದಗಾಂವೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಣಮಟ್ಟದ ತಾಂತ್ರಿಕ ಶಿಕ್ಷಣದಿಂದ ರಾಜ್ಯದವರಿಗೆ ಆದ್ಯತೆ: ಸಚಿವ ಜಿ.ಪರಮೇಶ್ವರ ಹೇಳಿಕೆ
    ತುಮಕೂರು April 10, 2025

    ಗುಣಮಟ್ಟದ ತಾಂತ್ರಿಕ ಶಿಕ್ಷಣದಿಂದ ರಾಜ್ಯದವರಿಗೆ ಆದ್ಯತೆ: ಸಚಿವ ಜಿ.ಪರಮೇಶ್ವರ ಹೇಳಿಕೆ

    By adminApril 10, 2025No Comments2 Mins Read
    parameshwar

    ತುಮಕೂರು: ಭಾರತವು ಮುಂದಿನ ದಿನಗಳಲ್ಲಿ ತಂತ್ರಜ್ಞಾನ‌ ಕ್ಷೇತ್ರದಲ್ಲಿ ಮೊದಲ ಸ್ಥಾನಕ್ಕೆ ಬಂದೇ ಬರುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.

    ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಜಿಪಿಟಿ ಹಳೆಯ ವಿದ್ಯಾರ್ಥಿಗಳ ಸಂಘವು ನೂತನವಾಗಿ ನಿರ್ಮಿಸಿರುವ ಕಲ್ಪವೃಕ್ಷ ಸಭಾಂಗಣದ ಉದ್ಘಾಟನೆಯನ್ನು ನೆರವೇರಿಸಿ, ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಆಧುನಿಕತೆ ಬಹಳ ವೇಗವಾಗಿ ಬದಲಾಗುತ್ತಿದೆ. ಯಾವುದೇ ದೇಶಕ್ಕೆ ಹೋದರು ಭಾರತದ ತಾಂತ್ರಿಕ ಪದವೀಧರು ಸಿಗುತ್ತಾರೆ. ನಾಸಾದಲ್ಲಿ ಶೇ.20ರಷ್ಟು ವಿಜ್ಞಾನಿಗಳು ಭಾರತದವರಿದ್ದಾರೆ. ಹೀಗಾಗಿಯೇ ಪ್ರಪಂಚದ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತವನ್ನು ಗುರುತಿಸುತ್ತಿದ್ದಾರೆ. ತಾಂತ್ರಿಕ ಶಿಕ್ಷಣದಲ್ಲಿ ಪಾಲಿಟೆಕ್ನಿಕ್ ಬಹುಮುಖ್ಯವಾದ ಅಂಗ. ಕರ್ನಾಟಕವು ತಾಂತ್ರಿಕ ಶಿಕ್ಷಣ ನೀಡುವುದರಲ್ಲಿ ಮುಂದೆ ಇದೆ ಎಂದರು.

    ದೇಶದಲ್ಲಿ ತಾಂತ್ರಿಕ ಪದವಿದರರನ್ನು ಉತ್ಪಾದಿಸುವುದರಲ್ಲಿ ಕರ್ನಾಟಕ 4ನೇ ಸ್ಥಾನದಲ್ಲಿದೆ.‌ ನಮ್ಮ ರಾಜ್ಯ ನೀಡುತ್ತಿರುವ ಗುಣಮಟ್ಟದ ಶಿಕ್ಷಣದಿಂದ ಹೆಚ್ಚು ಪ್ರಾತಿನಿದ್ಯ ಸಿಕ್ಕಿದೆ. ಇಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳನ್ನು ಇಡೀ ವಿಶ್ವದಲ್ಲಿ ಮೊದಲ ಆದ್ಯತೆಯಲ್ಲಿ ಗುರುತಿಸುತ್ತಾರೆ. ರಾಜ್ಯದಲ್ಲಿ ಯಾವುದೇ ಸರ್ಕಾರ ಇರಬಹುದು. ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತ ಬಂದಿವೆ ಎಂದು ಹೇಳಿದರು.

    ಸ್ವಾತಂತ್ರ್ಯದ ನಂತರ ಪೂರ್ವಜರು ನಮ್ಮ ಹಿರಿಯರು ದೂರದೃಷ್ಟಿ ಇಟ್ಟುಕೊಂಡು, ಬಲಿಷ್ಟ ಭಾರತ ಕಟ್ಟಲು ಹಲವು ಯೋಜನೆಗಳನ್ನು ನೀಡಿದ್ದಾರೆ. ಯೋಜನಾ ಆಯೋಗದ ಅಧ್ಯಕ್ಷರಾಗಿದ್ದ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರೂರವರು ಶಿಕ್ಷಣ ಮತ್ತು ಕೈಗಾರಿಕೆಗೆ ಆದ್ಯತೆ ನೀಡಿದರು. ಯುವಕರನ್ನು ಕೈಗಾರಿಕೆಗೆ ಸೇರಿಸುವ ನಿಟ್ಟಿನಲ್ಲಿ ತರಬೇತಿ ನೀಡಲು ಐಟಿಐ, ಪಾಲಿಟೆಕ್ನಿಕ್ ಕಾಲೇಜುಗಳನ್ನು ಪ್ರಾರಂಭಿಸಿದರು. ದೇಶದಲ್ಲಿ ಇಂದಿಗೂ ಸಾವಿರಾರು ಪಾಲಿಟೆಕ್ನಿಕ್ ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ.‌ ಜವಾಹರ್ ಲಾಲ್ ನೆಹರು ರವರು ಉದ್ಘಾಟಿಸಿರುವ ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಸಾವಿರಾರು ಯುವಕರಿಗೆ ಭವಿಷ್ಯ ಕಲ್ಪಿಸಿದೆ ಎಂದರು.

    ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 1.50 ಲಕ್ಷ ವಿದ್ಯಾರ್ಥಿಗಳು ದಾಖಲಾತಿ ಹೊಂದಲು ಅವಕಾಶವಿದೆ. ಆದರೆ, 60 ಸಾವಿರ ವಿದ್ಯಾರ್ಥಿಗಳು ದಾಖಲಾಗುತ್ತಿದ್ದಾರೆ. ತಕ್ಷಣ ಕೆಲಸ ಸಿಗುವ ಕೋರ್ಸ್ ಆಗಿರುವುದರಿಂದ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಬೇಕು. ಸೈಬರ್ ಸೆಕ್ಯೂರಿಟಿ, ಡೇಟಾ ಮ್ಯಾನೆಜ್‌ಮೆಂಟ್, ಎಐ ತಂತ್ರಜ್ಞಾನಕ್ಕೆ ಬೇಡಿಕೆ ಇದೆ. ಈ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು‌.

    ಈ ಸಂದರ್ಭದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ರವರು, ತುಮಕೂರಿನ ರಾಮಕೃಷ್ಣ ಆಶ್ರಮದ ಶ್ರೀ ವೀರೇಶಾನಂದ ಸ್ವಾಮೀಜಿ ರವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದರು. ತುಮಕೂರು ನಗರ ಶಾಸಕರಾದ ಜಿ.ಬಿ.ಜ್ಯೋತಿಗಣೇಶ, ಕಾಲೇಜಿನ ಪ್ರಾಂಶುಪಾಲರಾದ ಅನಿಲ್ ಕುಮಾರ್, ಜಿಪಿಟಿ ಹಳೆಯ ವಿದ್ಯಾರ್ಥಿಗಳ ಸಂಘದ ಸಂಸ್ಥಾಪಕ ಪ್ರಕಾಶ್ ಮುಂತಾದವರು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ವಾಣಿಜ್ಯ ಬಳಕೆಗೆ ಗೃಹ ಬಳಕೆ ಸಿಲಿಂಡರ್ ಬಳಕೆ: 8 ವಶ

    July 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಆ.12ರಿಂದ ಭೀಮನ ಅಮಾವಾಸ್ಯೆ ಮಹೋತ್ಸವ

    July 31, 2026

    ತಿಪಟೂರು: ತಾಲೂಕಿನ ಕಟ್ಟೇಮನೆ ಕೋಟೇನಾಯಕನಹಳ್ಳಿಯಲ್ಲಿ 58ನೇ ವರ್ಷದ ಶ್ರೀ ಬನಶಂಕರಿ ಅಮ್ಮನವರ ಭೀಮನ ಅಮಾವಾಸ್ಯೆ ಮಹೋತ್ಸವ ಆ.12 ಮತ್ತು 13…

    ಆ.3 ರಿಂದ ಕೋಟೆ ಗ್ರಾಮ ದೇವತೆ ಅಮ್ಮನವರ ಜಾತ್ರಾ ಮಹೋತ್ಸವ

    July 31, 2026

    ತುಮಕೂರು:  ಆ.3ರಿಂದ ಕೊಲ್ಲಾಪುರದಮ್ಮ, ಕರುಗಳಮ್ಮ ಜಾತ್ರಾ ಮಹೋತ್ಸವ

    July 31, 2026

    ಪಾವಗಡ: ವಸತಿ ಶಾಲೆಯಿಂದ ಓಡಿ ಹೋಗಿದ್ದ ವಿದ್ಯಾರ್ಥಿಗಳು ಪತ್ತೆ

    July 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.