ಬೆಂಗಳೂರು: ಹುಬ್ಬಳ್ಳಿಯಲ್ಲಿ ಅತ್ಯಾಚಾರ ಪ್ರಕರಣ ಆರೋಪಿ ರಿತೇಶ್ ಕುಮಾರ್ ಎನ್ ಕೌಂಟರ್ ಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ರೇಪಿಸ್ಟ್ ರಿತೇಶ್ ಕುಮಾರ್ ಎನ್ಕೌಂಟರ್ ಸಂದರ್ಭದಲ್ಲಿ ಪೊಲೀಸರು ಆತ್ಮರಕ್ಷಣೆಗಾಗಿ ಕಾಲಿಗೆ ಗುಂಡಿಕ್ಕಿದ್ದಾರೆ. ಆದರೆ ಅದು ಬೆನ್ನಿಗೆ ಬಿದ್ದಿದೆ. ನಾನು ತಕ್ಷಣ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ತನಿಖೆ ಮಾಡಿದ ನಂತರದಲ್ಲಿ ಸತ್ಯಾಂಶ ಗೊತ್ತಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಬಿಹಾರ ಮೂಲದ ವ್ಯಕ್ತಿ ಐದು ವರ್ಷದ ಮಗುನ ಎತ್ತಿಕೊಂಡು ಹೋಗಿ ಕೊಲೆ ಮಾಡಿದ್ದಾನೆ. ಕೆಲವೇ ಕ್ಷಣಗಳಲ್ಲಿ ಆತನ ಬಂಧನವಾಗಿದೆ. ಆತನನ್ನು ಸ್ಥಳ ಪರಿಶೀಲನೆಗೆ ಕರೆದುಕೊಂಡು ಹೋಗುವಾಗ. ಪೊಲೀಸರ ಮೇಲೆ ಅಟ್ಯಾಕ್ ಮಾಡಿದ್ದಾನೆ, ಪೊಲೀಸರು ಅವರ ಆತ್ಮ ರಕ್ಷಣೆ ಮಾಡಿಕೊಳ್ಳಬೇಕಲ್ಲಾ. ಹೀಗಾಗಿ ಕಾಲಿಗೆ ಫೈಯರ್ ಮಾಡಿದ್ದಾರೆ ಅದು ಬೆನ್ನಿಗೆ ಬಿದ್ದಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
ಘಟನೆ ಸಂಬಂಧ ನಾನು ತಕ್ಷಣ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮಾಡಲು ಸೂಚನೆ ನೀಡಿದ್ದೇನೆ. ತನಿಖೆ ಮಾಡಿದ ನಂತರದಲ್ಲಿ ಸತ್ಯಾಂಶ ಗೊತ್ತಾಗುತ್ತದೆ ಎಂದು ಅವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————