ತುಮಕೂರು: ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ತುಮಕೂರು ಮಹಾನಗರ ಪಾಲಿಕೆ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿರೋ ಸಾವಿರ ಕೆ.ಜಿ. ತೂಕದ ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನುಗೃಹ ಸಚಿವ ಡಾ.ಜಿ.ಪರಮೇಶ್ವರ್ ಅನಾವರಣಗೊಳಿಸಿದರು.
ಇದೇ ಸಂದರ್ಭದಲ್ಲಿ ಬೌದ್ಧ ಭಿಕ್ಕುಗಳು, ಕೇಂದ್ರ ಸಚಿವ ವಿ.ಸೋಮಣ್ಣ, ಸಚಿವರಾದ ಕೆ.ಎನ್.ರಾಜಣ್ಣ, ಡಾ.ಮಹದೇವಪ್ಪ, ಭೈರತಿ ಸುರೇಶ್ ಜಿಲ್ಲಾಧಿಕಾರಿ ಶುಭಕಲ್ಯಾಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್, ತುಮಕೂರು ಮಹಾನಗರ ಪಾಲಿಕೆ ಆಯುಕ್ತ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
12 ಅಡಿ ಎತ್ತರದ ಸಾವಿರ ಕೆ.ಜಿ. ತೂಕದ ಕಂಚಿನ ಅಂಬೇಡ್ಕರ್ ಪ್ರತಿಮೆಯಾಗಿದ್ದು, ಇದನ್ನು ಸಚಿವ ಪರಮೇಶ್ವರ್ ದಾನವಾಗಿ ನೀಡಿದ್ದಾರೆ. ಅಂಬೇಡ್ಕರ್ ಪ್ರತಿಮೆ ಅನಾವರಣಕ್ಕೂ ಮೊದಲು ಸಚಿವರು ಬೌದ್ಧ ಭಿಕ್ಕುಗಳು ಆಯೋಜಿಸಿದ್ದ ಪೂಜೆಯಲ್ಲಿ ಪಾಲ್ಗೊಂಡರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW