ತಿಪಟೂರು: ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ “ಮಹಿಳೆ ಮತ್ತು ಮಕ್ಕಳ ಅಪೌಷ್ಠಿಕತೆಯಲ್ಲಿ ಪೌಷ್ಠಿಕ ಆಹಾರದ ಮಹತ್ವ”ದ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿಯ ಮುಖ್ಯಸ್ಥರಾದ ಡಾ.ಗೋವಿಂದೇಗೌಡ ಉದ್ಘಾಟಿಸಿದರು. ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿಗಳಾದ ಡಾ.ರೂಪ ಬಿ. ಪಾಟೀಲ್ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು.
ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ಬಿ.ಎನ್. ಪ್ರೇಮ ಡಾ.ಅನಿತಾ, ಅಂಜುಮನ್ ಬಾನು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತರು ತರಬೇತಿಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು.
ವರದಿ: ಆನಂದ್ ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB