ಅಥ್ಲೆಟಿಕ್ ನಲ್ಲಿ ಪ್ರಸಿದ್ಧ ಕ್ರೀಡಾಪಟುವಾಗಿ ಏಷ್ಯನ್ ಗೇಮ್ಸ ಚಿನ್ನದ ಪದಕ ಗೆದ್ದು ಬಣ್ಣದ ಲೋಕದಲ್ಲಿ ಮಿಂಚಿದ್ದ ನಟ ಪ್ರವೀಣ್ ಕುಮಾರ್ ಸೋಬ್ತಿ(74) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡಿದೆ.ನಂತರ ವೈದ್ಯರನ್ನು ಮನೆಗೆ ಕರೆಸಿ ಚಿಕಿತ್ಸೆ ನೀಡಲಾಯಿತು ಆದರೆ ರಾತ್ರಿ 10.30 ರಲ್ಲಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ.
ಪ್ರವೀಣ್ ಡಿಸ್ಕಸ್ ಥ್ರೋ ಸೇರಿದಂತೆ ಅಥ್ಲೆಟಿಕ್ ಕ್ರೀಡೆಯಲ್ಲಿ ಅಂತರಾಷ್ಟೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಸಿದರು. 1966 ಮತ್ತು 1970 ರಲ್ಲಿ ಎರಡು ಚಿನ್ನದ ಪದಕಗಳನ್ನು ಒಳಗೊಂಡಂತೆ ಏಷ್ಯನ್ ಗೇಮ್ಸನಲ್ಲಿ ನಾಲ್ಕು ಪದಕಗಳನ್ನು ಗೆದ್ದರು. ಅವರು 1966 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕವನ್ನು ಗೆದ್ದರು.
1988 ರಲ್ಲಿ ಟಿವಿ ಪರದೆಯಲ್ಲಿ ಮೂಡಿ ಬಂದ ಮಹಾಭಾರತ ನಲ್ಲಿ ಭೀಮನ ಪಾತ್ರದಲ್ಲಿ ಮಿಂಚಿ ನಂತರ ಸಿನಿಮಾ ನಟನೆಯಲ್ಲಿ ಮತ್ತಷ್ಟು ಜನಪ್ರಿಯತೆಯನ್ನು ಗಳಿಸಿದರು.ಬಾಲಿವುಡ್ ನಲ್ಲಿ ತಮ್ಮ ದೇಹದಡ್ಯ ಮೂಲಕ ಸಾಹಸ ದೃಶ್ಯಗಳು ರಂಚಿಸಿತ್ತು ಕನ್ನಡದಲ್ಲೂ ತಮ್ಮ ಚಾಪು ಮೂಡಿಸಿ ಅಂಬರೀಶ್ ನಟನೆಯ ಹಾಂಗ್ ಕಾಂಗ್‍ನಲ್ಲಿ ಅಮರ್ , ಅಜಿತ್ ಸೇರಿದಂತೆ ಹಲವು ಸಿನಿಮಾದಲ್ಲಿ ಹೊಸ ಛಾಪು ಮೂಡಿಸಿದ್ದರು
ನವದೆಹಲಿಯ ಅಶೋಕ್ ವಿಹಾರ್ ನಿವಾಸದಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿತ್ತು ಹಲವು ನಟ,ನಟಿಯರು ಚಿತ್ರರಂಗದ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB