nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

    February 2, 2026

    ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

    February 2, 2026

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026
    Facebook Twitter Instagram
    ಟ್ರೆಂಡಿಂಗ್
    • ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ
    • ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ
    • ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ
    • ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ
    • ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು
    • ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ
    • ತುಮಕೂರು: ಗಾಂಧಿ ವಿಚಾರ ಮರೆಮಾಚುವ ಆಧುನಿಕ ಗೋಡ್ಸೆಗಳ ಬಗ್ಗೆ ಎಚ್ಚರ: ಕೆ.ದೊರೈರಾಜ್‌
    • ತುಮಕೂರು: ಅಮಾನಿಕೆರೆ ಗಾಜಿನಮನೆ ನವೀಕರಣಕ್ಕೆ ₹3 ಕೋಟಿ; ಜಲಕ್ರೀಡೆ ಅಕಾಡೆಮಿ ಸ್ಥಾಪನೆಗೆ ‘ಟೂಡಾ’ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿಂದೆ ಸಂಸ್ಕೃತ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು: ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ April 20, 2025

    ಹಿಂದೆ ಸಂಸ್ಕೃತ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು: ಸಿಎಂ ಸಿದ್ದರಾಮಯ್ಯ

    By adminApril 20, 2025No Comments2 Mins Read
    siddaramaiah

    ತುಮಕೂರು: ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

    ಪ್ರಜಾ ಪ್ರಗತಿ ಪತ್ರಿಕೆ,     ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.


    Provided by
    Provided by

    ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು.

    ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ ಕತೆಗಳನ್ನು ಕಟ್ಟಿ ಬಿಡ್ತಾರೆ ಹುಷಾರು ಎಂದು ಎಚ್ಚರಿಸಿದರು.

    ಬಸವಣ್ಣ 850 ವರ್ಷಗಳ ಹಿಂದೆಯೇ ಅನುಭವ ಮಂಟಪ ರಚಿಸಿ ಸಮ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದಿದ್ದರು.   ಪ್ರಗತಿಪರ ವಿಚಾರಗಳನ್ನು ಇಟ್ಟುಕೊಂಡವರಿಗೆ ನಿರಂತರವಾಗಿ ಸಮಸ್ಯೆ ಬರುತ್ತಲೇ ಇರುತ್ತವೆ. ಹೀಗಾಗಿ ಪ್ರಗತಿಪರ ವಿಚಾರಗಳ ಜೊತೆ ನೀವು ಸದಾ ಗಟ್ಟಿಯಾಗಿ ನಿಲ್ಲಬೇಕು.

    ಪ್ರಗತಿಪರ ವಿಚಾರಗಳ ಜೊತೆಗೆ ನಾವು ನಿಲ್ಲದೆ ಸಮ ಸಮಾಜ ಬರಬೇಕು ಎಂದರೆ ಸಾಧ್ಯವಿಲ್ಲ ಎಂದು ವಿವರಿಸಿದರು.

    ಮುಖ್ಯಮಂತ್ರಿಗಳ ಭಾಷಣದ ಇತರೆ ಹೈಲೈಟ್ಸ್:

    * ಜಾತಿಗೆ ಚಲನ ಇಲ್ಲ. ವರ್ಗಕ್ಕೆ ಚಲನೆ ಇಲ್ಲ. ಜಾತಿ ವ್ಯವಸ್ಥೆ ನಿಂತ ನೀರು. ಚಲನೆ ಇಲ್ಲ. ಆರ್ಥಿಕ ಚಲನೆ  ಸಿಕ್ಕಾಗ ಮಾತ್ರ ಜಾತಿಯಲ್ಲೂ ಚಲನೆ ಸಿಗುತ್ತದೆ. ಈ ಚಲನೆ ಸಿಗಬೇಕಾದರೆ ಶಿಕ್ಷಣದ ಅಗತ್ಯ ಇದೆ ಎಂದರು.

    * ಜಾತಿ ಮುಕ್ತ ಮಾನವೀಯ ಸಮಾಜ ನಿರ್ಮಾಣ ನಮ್ಮ ಸಂವಿಧಾನದ ಆಶಯ ಮತ್ತು ಬದ್ಧತೆ. ಆದರೆ ಇವತ್ತಿಗೂ ಅಸ್ಪೃಶ್ಯತೆ ಹೋಗಿಲ್ಲದಿರುವುದು, ಶೈಕ್ಷಣಿಕ ಸಮಾನತೆ ಇಲ್ಲದಿರುವುದು  ಬೇಸರದ ಸಂಗತಿ.

    * ನಾನು ಶಿಕ್ಷಣ ಪಡೆದಿರುವುದು ನನ್ನ ಸ್ವಾರ್ಥಕ್ಕೆ ಅಲ್ಲ. ಅವಕಾಶ ವಂಚಿತ ಸಮುದಾಯಗಳ ಬಿಡುಗಡೆಗಾಗಿ ವಿದ್ಯೆ ಸಂಪಾದನೆ ಮಾಡಿದ್ದೇನೆ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಅರ್ಥ ಮಾಡಿಕೊಳ್ಳಬೇಕು.

    * ಸಂವಿಧಾನ ಬರದೇ ಇದ್ದರೆ ನಾವು, ನೀವು ಶಿಕ್ಷಣ ಪಡೆಯಲು ಸಾಧ್ಯವಿರಲಿಲ್ಲ.

    ಮನುಸ್ಮೃತಿ ಕಾರಣದಿಂದ ಜಾತಿ ಅಸಮಾನತೆ, ಜಾತಿ ಶೋಷಣೆ, ಜಾತಿ ದೌರ್ಜನ್ಯ ಹೆಚ್ಚಾಯಿತು

    *ಪಟ್ಟಭದ್ರರು  ಹಿಂದಿನ ಜನ್ಮದ ಕರ್ಮ ಎಂದು ನಂಬಿಸಿ ಜನರನ್ನು ವಂಚಿಸುತ್ತಿದ್ದಾರೆ. ಅದಕ್ಕೇ ಬಸವಣ್ಣನವರು ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದರು. ನಿಮ್ಮಲ್ಲಿ ಎಷ್ಟು ಜನ ಕರ್ಮ ಸಿದ್ಧಾಂತ ತಿರಸ್ಕರಿಸಿದ್ದೀರೋ ಗೊತ್ತಿಲ್ಲ.

    *ಬ್ರಹ್ಮ ಒಬ್ಬರಿಗೆ ಶಿಕ್ಷಣ, ಮತ್ತೊಬ್ಬರಿಗೆ ಅನಕ್ಷರತೆ ಸಿಗಲಿ ಅಂತ ಬರೆದರಾ? ಒಬ್ಬನಿಗೆ ಬಡವನಾಗು, ಮತ್ತೊಬ್ಬನಿಗೆ ಶ್ರೀಮಂತನಾಗು ಅಂತ ಬ್ರಹ್ಮ ಬರೆದರಾ ? ಒಬ್ಬ ಹೊಟ್ಟೆತುಂಬ ಉಣ್ಣಬೇಕು, ಉಳಿದವರು ಹಸಿವಿನಿಂದ ಬಿದ್ದಿರಬೇಕು ಎಂದು ಬ್ರಹ್ಮ ಬರೆದುಬಿಟ್ಟರಾ ಎಂದು ಪ್ರಶ್ನಿಸಿದರು.

    ಪಟ್ಟಭದ್ರರು ಬಸವಣ್ಣನವರ ಕ್ರಾಂತಿ ಮುಂದುವರೆಸಲು ಬಿಡಲಿಲ್ಲ. ಆದ್ದರಿಂದ ನಾವು ವೈಜ್ಞಾನಿಕವಾಗಿ, ವೈಚಾರಿಕವಾಗಿ ಚಿಂತಿಸುವುದು ಅಗತ್ಯ

    *ಅಹಿಂದ ಸಮಾಜ ಮತ್ತು ಎಲ್ಲಾ ಜಾತಿ, ಧರ್ಮಗಳ ಬಡತನ, ಹಸಿವು ನಿವಾರಣೆ ಆಗಬೇಕು. ಅನ್ನಕ್ಕಾಗಿ ಯಾರೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿ ನಿಲ್ಲಬಾರದು ಎನ್ನುವ ಕಾರಣದಿಂದ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದೆ ಎಂದು ಸ್ಮರಿಸಿದರು.

    *ಕಾಯಕ, ದಾಸೋಹ ಬಸವಣ್ಣನವರ ತತ್ವ.    ಇದನ್ನು ಎಲ್ಲರೂ ಪಾಲಿಸಬೇಕು ಎಂದರು.

    *ಎಲ್ಲಾ ಶ್ರಮಿಕ ವರ್ಗಗಳ ಸಂಸ್ಕೃತಿ, ಆಚಾರ, ವಿಚಾರ ಹೊರಗೆ ಬರಬೇಕು. ಇದಕ್ಕಾಗಿ ಎಲ್ಲರೂ ಸಾಹಿತ್ಯ ರಚನೆಯಲ್ಲಿ ತೊಡಗೇಕು ಎಂದರು.

    *ಹಿಂದೆ ಸಂಸ್ಕೃತ ಕಲಿಯುವವರಿಗೆ ಕಾದ ಸೀಸದ ಶಿಕ್ಷೆ ನಿಗಧಿಯಾಗಿತ್ತು. ಆದರೆ ಈಗ ಶಿಕ್ಷಣ ಸಿಕ್ಕಿದೆ. ನಿಮ್ಮ ನಿಮ್ಮ‌ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ. ನಮ್ಮ ಜ್ಞಾನ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು ಎಂದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

    February 2, 2026

    ನಾನು ತಂದೆಯಾಗ್ತಿರೋದು ಇನ್‌’ಸ್ಟಾಗ್ರಾಮ್‌’ಗೂ ಗೊತ್ತಾಗಿದೆ: ನಟ ‘ಡಾಲಿ’ ಧನಂಜಯ್

    January 31, 2026

    ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಇನ್ಸ್‌’ಪೆಕ್ಟರ್; ಮೈದಾನದಲ್ಲೇ ಹೈಡ್ರಾಮಾ!

    January 30, 2026

    Comments are closed.

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ

    February 2, 2026

    ಪುತ್ತೂರು: ಸಾಂಸ್ಕೃತಿಕ ಶ್ರೀಮಂತಿಕೆಯ ಕರಾವಳಿಯ ಕ್ರೀಡೆ 33ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವು ಪುತ್ತೂರು ಶ್ರೀ…

    ಬೆಂಗಳೂರಿನಲ್ಲಿ 18 ಕೋಟಿ ರೂ. ಚಿನ್ನಾಭರಣ ದೋಚಿದ ನೇಪಾಳಿ ದಂಪತಿ

    February 2, 2026

    ದಲಿತ ಚಕ್ರವರ್ತಿ ಕುರಂಗರಾಜನ 278ನೇ ಪಟ್ಟಾಭಿಷೇಕೋತ್ಸವ: ಕುರಂಗರಾಜರನ್ನು ಅನುಸರಿಸಲು ಕರೆ

    February 2, 2026

    ಫೆ.6: ಕಣಕೂರು ಲಕ್ಷ್ಮೀ ವೆಂಕಟೇಶ್ವರ ಕಲ್ಯಾಣೋತ್ಸವ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.