nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026
    Facebook Twitter Instagram
    ಟ್ರೆಂಡಿಂಗ್
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭೂಕಬಳಿಕೆದಾರರಿಂದ ಶೀಬಿ ಅರಣ್ಯ ಭೂಮಿ ರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ
    ರಾಜ್ಯ ಸುದ್ದಿ May 8, 2025

    ಭೂಕಬಳಿಕೆದಾರರಿಂದ ಶೀಬಿ ಅರಣ್ಯ ಭೂಮಿ ರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

    By adminMay 8, 2025No Comments2 Mins Read
    Ishwara Khandre

    ತುಮಕೂರು: ಜಿಲ್ಲೆಯ ಶಿರಾ ತಾಲ್ಲೂಕು ಕಳ್ಳಂಬೆಳ್ಳ ಹೋಬಳಿ ಶೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದು ಪಡಿಸಲು ಮತ್ತು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಂಡು, ಅಮೂಲ್ಯವಾದ ಅರಣ್ಯ ಭೂಮಿಯನ್ನು ಸಂರಕ್ಷಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದರು.

    ಶೀಬಿ ಅರಣ್ಯ ಪ್ರದೇಶಕ್ಕೆ ಶನಿವಾರ ಬೆಳಿಗ್ಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದ ಅವರು ಬೆಂಗಳೂರು-ಪುಣೆ ಹೆದ್ದಾರಿಯ ಪಕ್ಕದಲ್ಲೇ ಇರುವ ಈ ಅರಣ್ಯ ಭೂಮಿಗೆ ಭಾರೀ ಮೌಲ್ಯವಿದ್ದು, ಕೆಲವರು ಇದನ್ನು ಕಬಳಿಸಲು ಮತ್ತು ಒತ್ತುವರಿ ಮಾಡಲು ಯತ್ನಿಸುತ್ತಿದ್ದಾರೆ ಹೀಗಾಗಿ ಅರಣ್ಯ ಸಿಬ್ಬಂದಿ ಕಟ್ಟೆಚ್ಚರದಿಂದ ಇರಬೇಕು ಎಂದು ನಿರ್ದೇಶನ ನೀಡಿದರು.

    ಕೆಲವರು ನ್ಯಾಯಾಲಯದಲ್ಲಿ ಭೂಮಿಯ ಮಾಲೀಕತ್ವದ ಹೋರಾಟ ನಡೆಸುತ್ತಿದ್ದಾರೆ. ಸುಪ್ರೀಂಕೋರ್ಟ್ ಡಿನೋಟಿಫಿಕೇಷನ್ ಆಗದ ಹೊರತು, ಅರಣ್ಯ ಭೂಮಿ ಅರಣ್ಯವಾಗಿಯೇ ಉಳಿಯುತ್ತದೆ ಎಂದು ಹೇಳಿದರಲ್ಲದೆ, ಡಿನೋಟಿಫಿಕೇಷನ್ ಆಗದ ಈ ಅರಣ್ಯದಲ್ಲಿನ ಅಕ್ರಮ ಮಂಜೂರಾತಿ ರದ್ದುಪಡಿಸುವಂತೆ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾವೆ ಹೂಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

    ಭೂಮಾಫಿಯಾದವರು ಬಡವರನ್ನು ಮುಂದಿಟ್ಟುಕೊಂಡು ಬೆಲೆಬಾಳುವ ಭೂಮಿ ಕಬಳಿಸಲು ಯತ್ನಿಸುತ್ತಾರೆ. ಅರಣ್ಯ ಭೂಮಿಯನ್ನು ಕಬಳಿಸಲು ಯತ್ನಿಸುವವರ ವಿರುದ್ಧ ಹಾಗೂ ಅದಕ್ಕೆ ಸಹಕಾರ ನೀಡುವ ಅಧಿಕಾರಿಗಳ ವಿರುದ್ಧವೂ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಪ್ರಕೃತಿ, ಪರಿಸರ, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದು ನಮ್ಮ ಸಂವಿಧಾನ ಸಾರುತ್ತದೆ. ಸರ್ವೋನ್ನತ ನ್ಯಾಯಾಲಯ ಕೂಡ ಹಲವು ಪ್ರಕರಣಗಳಲ್ಲಿ ಇದನ್ನೇ ಪುನರುಚ್ಛರಿಸಿದೆ. ಹೀಗಾಗಿ ಅರಣ್ಯ ಸಂರಕ್ಷಣೆಯ ಹೊಣೆ ಹೊತ್ತು ಅಧಿಕಾರಿಗಳು ಅರಣ್ಯ ಉಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಅವರು ತಿಳಿಸಿದರು.

    ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ ಅವರೂ ಸಹ ಈ ಅರಣ್ಯ ಪ್ರದೇಶವನ್ನು ಸಂರಕ್ಷಿಸಲು ಬೇಲಿ ಹಾಕುವ ಬಗ್ಗೆ ಪ್ರಸ್ತಾವನೆ ನೀಡಿದ್ದು, ಈ ಅರಣ್ಯ ಪ್ರದೇಶವು ಭೂ ಮಾಫಿಯಾದ ಪಾಲಾಗದಂತೆ ಉಳಿಸಲು ಎಲ್ಲ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅನುಪಮಾ, ವಕೀಲರಾದ ಸೂರ್ಯ ಮುಕುಂದರಾಜ್, ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    ಶಿವಮೊಗ್ಗದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಕಾರಿಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

    October 12, 2026

    ‘ಪ್ರೇಮದ ಊರಲಿ’ ಸಿನಿಮಾ ವೀಕ್ಷಣೆಗೆ ಹೋಗಿದ್ದ ಕುಟುಂಬಕ್ಕೆ ಶಾಕ್; ಮಂಚದ ಕೆಳಗೆ ಅವಿತಿದ್ದ ಕಳ್ಳ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದ!

    October 12, 2026

    Comments are closed.

    Our Picks

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ದೆಹಲಿ:  ಅಧಿಕಾರ ಹಾಗೂ ಹುದ್ದೆಗಳ ಆಡಂಬರವನ್ನೇ ಮೈಮೇಲೆ ಹೊತ್ತು ತಿರುಗುವ ಇಂದಿನ ರಾಜಕಾರಣದ ನಡುವೆ, ಸರಳತೆ ಮತ್ತು ಕಾರ್ಯಕರ್ತರ ಮೇಲಿನ…

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.