nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026
    Facebook Twitter Instagram
    ಟ್ರೆಂಡಿಂಗ್
    • ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌
    • ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
    • ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
    • ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
    • ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
    • ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
    • ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
    • ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್‌ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತ ಇಂದು ಅನಿವಾರ್ಯ ಕಾರಣಗಳಿಂದ ಸಂಘರ್ಷಕ್ಕೆ ಇಳಿಯಬೇಕಾಗಿದೆ: ಪ್ರಸನ್ ಕುಮಾರ್
    ಪಾವಗಡ May 10, 2025

    ಭಾರತ ಇಂದು ಅನಿವಾರ್ಯ ಕಾರಣಗಳಿಂದ ಸಂಘರ್ಷಕ್ಕೆ ಇಳಿಯಬೇಕಾಗಿದೆ: ಪ್ರಸನ್ ಕುಮಾರ್

    By adminMay 10, 2025No Comments2 Mins Read
    pavagada

    ಪಾವಗಡ: ಅಂತರಾಷ್ಟ್ರೀಯ ಸಂಬಂಧಗಳಲ್ಲಿ ಅಲಿಪ್ತ ನೀತಿಯನ್ನು ಸಾರಿದ ರಾಷ್ಟ್ರ ನಮ್ಮದು, ವಿದೇಶಾಂಗ ನೀತಿಯಲ್ಲಿಯೂ ಸಹ ಭಾರತ ಉತ್ತಮ ಸ್ಥಾನ ಪಡೆದಿದೆ, ನಾವಿಂದು ಅನಿವಾರ್ಯ ಕಾರಣಗಳಿಂದ ಭಾರತ ಅಶಾಂತಿ ಸಂಘರ್ಷಕ್ಕೆ ಇಳಿಯಬೇಕಾಗಿದೆ ಎಂದು ತುಮಕೂರು ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ಕುಲ ಸಚಿವ ಪ್ರಸನ್ ಕುಮಾರ್ ಆತಂಕ ವ್ಯಕ್ತಪಡಿಸಿದ್ದಾರೆ.

    ಶುಕ್ರವಾರ ಪಾವಗಡ ಪಟ್ಟಣದ ಶಿರಾ ರಸ್ತೆ ಮಾರ್ಗದಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಜಾನಪದ ಉತ್ಸವವನ್ನು ಕುರುಬರಹಳ್ಳಿ ಗೇಟ್ ನಿಂದ ಕಾಲೇಜಿನವರಿಗೂ ವಿವಿಧ ಕಲಾತಂಡಗಳ ಮೆರವಣಿಗೆಯೊಂದಿಗೆ ಆಗಮಿಸಿ ನಂತರ ವೇದಿಕೆಯಲ್ಲಿ  ವಾದ್ಯ ಬಾರಿಸುವುದರ ಮೂಲಕ ಚಾಲನೆ ನೀಡಿದ ನಂತರ ಅವರು ಮಾತನಾಡಿದರು.

    ರಾಜ್ಯದಲ್ಲಿ 140ಕ್ಕೂ ಅಧಿಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿದ್ದು, ರಾಷ್ಟ್ರೀಯ ಐಕ್ಯತೆ ಮೂಡಿಸುವ ಉದ್ದೇಶದಿಂದ ಜನಪದ ಉತ್ಸವಗಳನ್ನು ಆಯೋಜಿಸಲಾಗುತ್ತಿದೆ, ನಾಡು ನುಡಿ, ಕಲೆ, ಸಂಸ್ಕೃತಿಯನ್ನು ಉಳಿಸಿ ರಾಷ್ಟ್ರೀಯ ಭಾವೈಕ್ಯತೆ ಯನ್ನು ಬೆಳೆಸುವ ಮತ್ತು ಗ್ರಾಮೀಣ ಸೊಗಡನ್ನು ಉಳಿಸುವ ಉದ್ದೇಶದಿಂದ ಈ ಒಂದು ಜನಪದ ಉತ್ಸವ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

    ಇಂದಿನ ಯುವ ಸಮೂಹ ಇಂತಹ ಜನಪದ ಉತ್ಸವಗಳಲ್ಲಿ ಭಾಗಿಯಾಗಿ ರಾಷ್ಟ್ರೀಯ ಭಾವೈಕ್ಯತೆ ಮೂಡಿಸಿಕೊಳ್ಳಬೇಕಾಗಿದೆ ಎಂದು ತಿಳಿಸಿ ಅನಿವಾರ್ಯವಾಗಿ ಪಾಕಿಸ್ತಾನ ಜೊತೆ ಯುದ್ಧ ಮಾಡುತ್ತಿರುವ ಸೈನಿಕರ ಜೊತೆ ನಾವು ಸಹ ಯುದ್ಧದಲ್ಲಿ ಪಾಲ್ಗೊಳ್ಳಬೇಕೆಂದು ದೇಶಪ್ರೇಮದ ಸಾರವನ್ನು ಉರಿದುಂಬಿಸಿದರು.

    ಪ್ರಾಂಶುಪಾಲರಾದ ಡಾ.ಶಿವನಂದಯ್ಯ ಮಾತನಾಡಿ,  ಈ ಕಾಲೇಜು ಸರ್ವತೋಮುಖವಾಗಿ ಅಭಿವೃದ್ಧಿಯಾಗುತ್ತಿದ್ದು ಮುಂದಿನ ಶೈಕ್ಷಣಿಕ ಸಾಲಿನಿಂದ ಬಿ.ಎಸ್ಸಿ. ಬಿಸಿಎ ಕೋರ್ಸ್ ಗಳನ್ನ ಪ್ರಾರಂಭಿಸಲಾಗುತ್ತಿದೆ, ಇಲ್ಲಿಯವರೆಗೆ 11 ಕೋಟಿ ವೆಚ್ಚದಲ್ಲಿ ವಿವಿಧ ಕಟ್ಟಡಗಳನ್ನು ನಿರ್ಮಾಣ ಮಾಡಲಾಗಿದ್ದು., ಇನ್ನೂ ಐದು ಕೋಟಿ ವೆಚ್ಚದಲ್ಲಿ ವಿಜ್ಞಾನ ವಿಭಾಗ ಶಾಸಕರಾದ ಹೆಚ್.ವಿ.ವೆಂಕಟೇಶ್ ಅವರು ಮಂಜೂರು ಮಾಡಿಸಿದ್ದು, ಮಹಿಳಾ ವಿಶ್ರಾಂತಿ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಗುವುದು, ಈ ಕಾಲೇಜು ಸರ್ವತೋಮುಖ ಅಭಿವೃದ್ಧಿಯಾಗಲು ಕಾರಣಭೂತರಾದ ಮಾಜಿ ಸಚಿವರಾದ ವೆಂಕಟರಮಣಪ್ಪ ಮತ್ತು ಶಾಸಕರಾದ ಹೆಚ್.ವಿ.ವೆಂಕಟೇಶ್ ಕೃತಜ್ಞತೆಗಳನ್ನು ಸಲ್ಲಿಸಿದರು.

    ಕಾಲೇಜಿನ ನಿಕಟ ಪೂರ್ವ ಪ್ರಾಂಶುಪಾಲರ ಕೆ.ಓ. ಮಾರಪ್ಪ ಮಾತನಾಡಿ, ಕುರುಬರಹಳ್ಳಿ ಗೇಟ್ ಬಳಿ ಸುಮಾರು 13 ಎಕರೆಯಲ್ಲಿ ಸ್ಥಳವನ್ನು ನೀಡಿದ್ದರ ಫಲವಾಗಿ ಇಂದು ಸುಸಜ್ಜಿತವಾದ ಮಹಿಳಾ ಪ್ರಥಮ ದರ್ಜೆ ಕಾಲೇಜಿನು ನಿರ್ಮಾಣ ಮಾಡಲಾಗಿದೆ ಮತ್ತು ಕಾಲೇಜಿಗೆ ಕಾಪೌಂಡನ್ನು  ನಿರ್ಮಾಣ ಮಾಡಬೇಕಾಗಿದ್ದು, ನ್ಯಾಕ್ ಸಮಿತಿಯಿಂದ ಈ ಕಾಲೇಜು ಬಿ+ ಗ್ರೇಡ್ ಪಡೆದುಕೊಂಡಿದೆ ಎಂದು ಹೆಮ್ಮೆಯನ್ನು ವ್ಯಕ್ತಪಡಿಸಿದರು.

    ನಿವೃತ್ತ ಶಿಕ್ಷಕರಾದ ಮೈಲಪ್ಪ ನಿವೃತ್ತ ಪ್ರಾಂಶುಪಾಲರಾದ ಬಸವಲಿಂಗಪ್ಪ, ಮುದ್ರಾಂಕ ಇಲಾಖೆ ಅಧಿಕಾರಿ ಹಾಗೂ ಜನಪದ ಕಲಾವಿದರಾದ ನಾಗರಾಜ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಸಾಂಸ್ಕೃತಿಕ ಸಂಚಾಲಕರಾದ ಮಧು ಕುಮಾರ್, ಉಪನ್ಯಾಸಕ ನಾಗೇಂದ್ರ ಮಾತನಾಡಿದರು.

    ಜನಪದ ಉತ್ಸವದಲ್ಲಿ ಬಲರಾಂ ಮತ್ತು ತಂಡ, ಮತ್ತು ನಾಗರಾಜ್ ಮತ್ತು ತಂಡ ಹಾಗೂ ನಾಗೇಂದ್ರ ಮತ್ತು ತಂಡದಿಂದ ಕೋಲಾಟ ಪ್ರದರ್ಶನ ನಡೆಸಲಾಯಿತು.

    ನಾಗರಾಜು, ದ್ಯಾವೀರಪ್ಪ ಮತ್ತು ಮರಿಸ್ವಾಮಿ ತಂಡದಿಂದ ಜನಪದ ಗೀತೆಗಳನ್ನು ಹಾಡಲಾಯಿತು. ಕಾಲೇಜಿನ ವಿದ್ಯಾರ್ಥಿನಿಯರು ಸಹ ವಿವಿಧ ಜನಪದ ನೃತ್ಯ ಕಲಾಪ್ರಕಾರಗಳನ್ನು ಪ್ರದರ್ಶಿಸಿದರು.

    ಇದೇ ಸಂದರ್ಭದಲ್ಲಿ ಕುಲ ಸಚಿವರು ಭತ್ತ ಮತ್ತು ರಾಗಿ ರಾಶಿಗೆ ಗ್ರಾಮೀಣ ಶೈಲಿಯ ವಿಶೇಷ ಪೂಜೆಗಳನ್ನು ಸಹ ನೆರವೇರಿಸಲಾಗಿದ್ದು ಹಳೆಯ ಕಾಲದ ಆಯುಧಗಳನ್ನು ಮತ್ತು ಜಾನಪದ ಪರಿಕರಗಳನ್ನು ಪ್ರದರ್ಶಿಸಲಾಗಿದೆ

    ಈ ವೇಳೆ ಮುಖಂಡರಾದ ಪ್ರಕಾಶ್ ರೆಡ್ಡಿ , ಕಾಲೇಜು ಅಭಿವೃದ್ಧಿ ಸಮಿತಿಯ  ಸದಸ್ಯರಾದ ಸ್ಟುಡಿಯೋ ಅಮರ್, ರಾಜವಂತಿ ರಂಗನಾಥ್. ನಲಿಗಾನಹಳ್ಳಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ದುಗ್ಗಮ್ಮ ನಾಗಯ್ಯ, ಗ್ರಾಮ ಪಂಚಾಯತಿ ಸದಸ್ಯರು ಅಂಬುಜಾಕ್ಷಿ, ಜಯಮ್ಮ  ಸೇರಿದಂತೆ ವಿದ್ಯಾರ್ಥಿಗಳು ಕಾಲೇಜಿನ ಪ್ರಾಧ್ಯಾಪಕರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ  ಪಿ. ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    ವಿಶೇಷಚೇತನರು ಸಮಾಜದ ಮುಖ್ಯವಾಹಿನಿಗೆ ಬರಬೇಕು: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್

    July 7, 2026

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು

    June 30, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್‌

    July 26, 2026

    ತುಮಕೂರು: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಜವಾಬ್ದಾರಿ ಹೊತ್ತು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಸ್ವಾಗತಾರ್ಹ. ರಾಷ್ಟ್ರೀಯ…

    ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ

    July 26, 2026

    ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್

    July 26, 2026

    ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ

    July 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.