ಉಡುಪಿ: ಕಿರುತೆರೆ ಹಾಸ್ಯನಟ ರಾಕೇಶ್ ಪೂಜಾರಿ ತಮ್ಮ 33ನೇ ವಯಸ್ಸಿನಲ್ಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ. ಮುಂಜಾನೆ 2 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
‘ಕಾಮಿಡಿ ಕಿಲಾಡಿಗಳು’ ವೇದಿಕೆ ರಾಕೇಶ್ ಪೂಜಾರಿಯ ಬದುಕನ್ನು ಬದಲಿಸಿತು. ‘ಕಾಮಿಡಿ ಕಿಲಾಡಿಗಳು’ ಮೂರನೇ ಸೀಸನ್ನಲ್ಲಿ ಅವರು ವಿನ್ನರ್ ಆಗಿದ್ದರು. ಹಲವು ವರ್ಷಗಳಿಂದಲೂ ಅವರ ರಂಗಭೂಮಿ, ಕಿರುತೆರೆಯಲ್ಲಿ ಸಕ್ರಿಯರಾಗಿದ್ದರು.
ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ರಾಕೇಶ್ ಪೂಜಾರಿ ಅಭಿನಯಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW