ಪಾವಗಡ: ತಾಲೂಕಿನ ವೈ.ಎನ್. ಹೊಸಕೋಟೆ ನಾಡ ಕಚೇರಿಯಲ್ಲಿ ಸಾರ್ವಜನಿಕರಿಗೆ ಸರಿಯಾದ ಮೂಲಭೂತ ವ್ಯವಸ್ಥೆಗಳನ್ನೂ ಕಲ್ಪಿಸಲಾಗಿಲ್ಲ. ಸಾರ್ವಜನಿಕರು ದಾಖಲೆಗಳನ್ನು ಪಡೆದುಕೊಳ್ಳಲು ಕಟ್ಟಡ ಸೈಡಿನ ಕಿಟಕಿಯಲ್ಲಿ ರಣ ಬಿಸಿಲಿನಲ್ಲಿ ಕ್ಯೂ ನಿಲ್ಲುವಂತಹ ಸ್ಥಿತಿ ಎದುರಾಗಿದೆ.
ಈ ಸಂಬಂಧ ಕೂಡಲೇ ಇದಕ್ಕೆ ಸಂಬಂಧ ಪಟ್ಟವರು ಸೂಕ್ತ ವ್ಯವಸ್ಥೆಯನ್ನು ಮಾಡಿಕೊಡಬೇಕು. ನಾಡ ಕಚೇರಿಯಲ್ಲೇ ಸಾರ್ವಜನಿಕರಿಗೆ ಸರಿಯಾದ ವ್ಯವಸ್ಥೆ ಮಾಡಿಕೊಡಲು ಸಾಧ್ಯವಾಗದವರು ಇನ್ನು ಜನರಿಗೆ ಏನು ಸೇವೆ ನೀಡುತ್ತಾರೆ ಎನ್ನುವ ಪ್ರಶ್ನೆಗಳನ್ನು ಇದೀಗ ಸಾರ್ವಜನಿಕರು ಕೇಳುವಂತಾಗಿದೆ.
ಒಂದೋ ಕಚೇರಿಯೊಗೆ ಕರೆದು ದಾಖಲೆಗಳನ್ನು ಕೊಡಬೇಕು. ಸಾರ್ವಜನಿಕರನ್ನು ಬಿಸಿಲಲ್ಲಿ ನಿಲ್ಲಿಸಿ ಅಧಿಕಾರಿಗಳು ನೆರಳಲ್ಲಿ ಕುಳಿತು ನಡೆಸುತ್ತಿರುವ ದರ್ಬಾರ್ ಮೊದಲು ನಿಲ್ಲಿಸಬೇಕು. ನೀವು ಜನರ ಸೇವಕರೇ ಹೊರತು, ಆಳುವ ದೊರೆಗಳಲ್ಲ ಎನ್ನುವುದನ್ನು ಮೊದಲು ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕು. ಇದೊಂದು ದುರಾಹಂಕಾರದ ಪರಮಾವಧಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB