ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನದ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ, ‘ಕಾಂತಾರ ಚಾಪ್ಟರ್ 1’ರಲ್ಲಿ ನಿನ್ನ ಪಾತ್ರ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ತುಂಬಲಾರದ ನಷ್ಟ ಎಂದು ಬರೆದುಕೊಂಡಿದ್ದಾರೆ.
ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ರಿಷಬ್ ಶೆಟ್ಟಿ, ನೀನು ನನ್ನ ಮನಸ್ಸಿನಲ್ಲಿ ಎಂದೆಂದಿಗೂ ಒಬ್ಬ ಅದ್ಭುತ ಕಲಾವಿದ. ‘ಕಾಂತಾರ ಸಿನಿಮಾದಲ್ಲಿ ನಿನ್ನ ಪಾತ್ರ ಹಾಗೂ ಅದನ್ನು ನಿರ್ವಹಿಸುವಾಗ ನಿನ್ನ ಮುಖದ ನಗು ನನ್ನ ಕಣ್ಣಲ್ಲಿ ಎಂದೆಂದಿಗೂ ಶಾಶ್ವತ. ಕಲಾವಿದ ವರ್ಗಕ್ಕೆ ಇದೊಂದು ತುಂಬಲಾರದ ನಷ್ಟ. ಮತ್ತೆ ಹುಟ್ಟಿ ಬಾ ಗೆಳೆಯ. ನಿನ್ನ ಆತ್ಮಕ್ಕೆ ಶಾಂತಿ ಸಿಗಲಿ. ದೇವರು ಈ ಆಘಾತವನ್ನು ಸಹಿಸುವ ಶಕ್ತಿ ನಿನ್ನ ಕುಟುಂಬಕ್ಕೆ ಕೊಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಇನ್ನೂ ಹೊಂಬಾಳೆ ಫಿಲ್ಮ್ಸ್ ಕೂಡ ರಾಕೇಶ್ ಅಗಲಿಕೆಗೆ ಸಂತಾಪ ಸೂಚಿಸಿದ್ದು, ನಟ ರಾಕೇಶ್ ಪೂಜಾರಿ ನಿಧನಕ್ಕೆ ತೀವ್ರ ಸಂತಾಪಗಳು. ಈ ನೋವನ್ನು ಭರಿಸುವ ಶಕ್ತಿ ಕುಟುಂಬಸ್ಥರಿಗೆ, ಅವರ ಆಪ್ತರಿಗೆ ಹಾಗೂ ಹಿತೈಷಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇವೆ. ಈ ದುಃಖದ ಘಳಿಗೆಯಲ್ಲಿ ನಾವೆಲ್ಲರೂ ಅವರ ಕುಟುಂಬದೊಂದಿಗೆ ಇದ್ದೇವೆ ಎಂದು ಸಂತಾಪ ಸೂಚಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————