ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ಪಾಮಾದಲ್ಲಿ ನಡೆದ ಭಾರೀ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಜೈಶ್ ಉಗ್ರರನ್ನು ಹತ್ಯೆ ಮಾಡಿದೆ.
ಪುಲ್ವಾಮಾ ಜಿಲ್ಲೆಯ ಉಪನಗರವಾದ ಅವಂತಿಪೋರಾದ ನಾಡರ್ ಮತ್ತು ಟ್ರಾಲ್ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ವೇಳೆ ಮೂವರು ಉಗ್ರರನ್ನು ಸೇನೆ ಹೊಡೆದುರುಳಿಸಿದೆ.
ಕಳೆದ ಮೂರು ದಿನಗಳಲ್ಲಿ ನಡೆದ 2ನೇ ಎನ್ ಕೌಂಟರ್ ಇದಾಗಿದೆ. ಹತ್ಯೆಗೀಡಾದ ಮೂವರು ಜೈಶ್ ಎ ಮೊಹಮ್ಮದ್ ಸಂಘಟನೆಗೆ ಸೇರಿದವರು ಎಂದು ಉನ್ನತ ಮೂಲಗಳು ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————


