ಕೊಪ್ಪಳ: ಮುಸ್ಟೂರು ಗ್ರಾಮ ಪಂಚಾಯತಿಯ ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿಯಾದ ಪರಿಣಾಮ 31 ಜನ ಗಾಯಗೊಂಡಿರುವ ಘಟನೆ ಕಾರಟಗಿ ತಾಲೂಕಿನ ಬರಗೂರು ಕ್ರಾಸ್ ಬಳಿ ನಡೆದಿದೆ.
ಬರಗೂರು ಕ್ರಾಸ್ ಬಳಿ ವಾಹನ ಪಲ್ಟಿಯಾಗಿದೆ. ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದು, 28 ಜನರಿಗೆ ಸಣ್ಣಪುಟ್ಟಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿ ಹಾಗೂ ಕೊಪ್ಪಳದ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಇನ್ನುಳಿದವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ಕಳುಹಿಸಲಾಗಿದೆ.
ವಿಷಯ ತಿಳಿದು ಸಚಿವ ಶಿವರಾಜ ತಂಗಡಗಿ ಆಸ್ಪತ್ರೆಗೆ ಭೇಟಿ ನೀಡಿದ್ದು, ಕಾರ್ಮಿಕರ ಆರೋಗ್ಯ ವಿಚಾರಿಸಿದ್ದಾರೆ. ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————