nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026
    Facebook Twitter Instagram
    ಟ್ರೆಂಡಿಂಗ್
    • ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.
    • ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!
    • ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ
    • BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!
    • OTP ಬಳಕೆಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ! ಮೊಬೈಲ್ ಬಳಕೆದಾರರು ತಿಳಿಯಬೇಕಾದ ಮಾಹಿತಿ
    • ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!
    • ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!
    • ಮಧುಗಿರಿ | KSRTC ಬಸ್ ನಿರ್ವಾಹಕನಿಂದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಡಿಪೋ ವ್ಯವಸ್ಥಾಪಕರಿಗೆ ದೂರು, ಸಾರ್ವಜನಿಕ ಆಕ್ರೋಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ‘ಮಾಧ್ಯಮರಂಗದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ’: ಪ್ರೊ.ವಸಂತ ಟಿ.ಡಿ.
    ತುಮಕೂರು May 20, 2025

    ‘ಮಾಧ್ಯಮರಂಗದ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಿ’: ಪ್ರೊ.ವಸಂತ ಟಿ.ಡಿ.

    By adminMay 20, 2025No Comments2 Mins Read
    tumakuru vv

    ತುಮಕೂರು: ಮಾಧ್ಯಮರಂಗ ಇಂದು ಬಹಳ ವಿಸ್ತಾರವಾಗಿ ಹರಡಿಕೊಂಡಿದೆ. ಇದರಲ್ಲಿರುವ ವಿಫುಲ ಅವಕಾಶಗಳನ್ನು ಯುವಜನತೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಸಂತ ಟಿ.ಡಿ. ತಿಳಿಸಿದರು.

    ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಸೋಮವಾರ ಹಮ್ಮಿಕೊಂಡಿದ್ದ ಒಂದು ದಿನದ ಮಾಧ್ಯಮ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

    ಮಾಧ್ಯಮ ಕ್ಷೇತ್ರ ಇಂದು ಪತ್ರಿಕೆ, ಟಿವಿಗಳಿಗೆ ಸೀಮಿತವಾಗಿಲ್ಲ. ಡಿಜಿಟಲ್ ಯುಗ ನಮ್ಮನ್ನು ಆವರಿಸಿಕೊಂಡಿದೆ. ಯುವಜನರು ಮನಸ್ಸು ಮಾಡಿದರೆ ಸಮಾಜದಲ್ಲಿ ಬದಲಾವಣೆ ತರಲು ಮಾಧ್ಯಮರಂಗವನ್ನು ಬಳಸಿಕೊಳ್ಳಬಹುದು. ವಿದ್ಯಾರ್ಥಿಗಳು ಇಂತಹ ಕಾರ್ಯಾಗಾರಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಮಾಧ್ಯಮ ರಂಗದ ಉದ್ಯೋಗಾವಕಾಶಗಳ ಬಗ್ಗೆ ಮಾತನಾಡಿದ ತುಮಕೂರು ವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಸಂಯೋಜಕ ಡಾ.ಸಿಬಂತಿ ಪದ್ಮನಾಭ ಕೆ.ವಿ. ಮಾಧ್ಯಮರಂಗದಲ್ಲಿ ಉದ್ಯೋಗ ಪಡೆಯುವವರಿಗೆ ಜೀವನೋಪಾಯವಷ್ಟೇ ಮುಖ್ಯವಾಗುವುದಿಲ್ಲ. ಸಮಾಜದ ಬದಲಾವಣೆಯಲ್ಲಿ ಪಾತ್ರವಹಿಸಿದ ತೃಪ್ತಿ ಹಾಗೂ ಸಾಮಾಜಿಕ ಮನ್ನಣೆ ಕೂಡ ಇರುತ್ತದೆ ಎಂದರು.

    ಸಾಂಪ್ರದಾಯಿಕ ಮಾಧ್ಯಮಗಳ ಜಾಗವನ್ನು ಡಿಜಿಟಲ್ ಮಾಧ್ಯಮಗಳು ಆಕ್ರಮಿಸಿಕೊಂಡರೂ ಮಾಧ್ಯಮಗಳ ಮಹತ್ವ ಕಡಿಮೆಯಾಗಿಲ್ಲ. ಅವಕಾಶಗಳು ಹತ್ತಾರು ಪಟ್ಟು ಹೆಚ್ಚಾಗಿವೆ. ಅವನ್ನು ಬಳಸಿಕೊಳ್ಳುವ ಕೌಶಲವನ್ನು ರೂಢಿಸಿಕೊಳ್ಳುವುದು ಮುಖ್ಯ, ಜಾಹೀರಾತು, ಗ್ರಾಫಿಕ್ಸ್ ಮತ್ತು ಅನಿಮೇಶನ್, ಸಿನಿಮಾ, ಭಾಷಾಂತರ, ತಾಂತ್ರಿಕ ಬರವಣಿಗೆ ಕ್ಷೇತ್ರಗಳಲ್ಲಿ ಅಪಾರ ಅವಕಾಶಗಳಿವೆ ಎಂದರು.

    ಕಂಪ್ಯೂಟರ್ ಜ್ಞಾನ, ಉತ್ತಮ ಸಂವಹನ ಕೌಶಲ, ಭಾಷೆಯ ಮೇಲಿನ ಹಿಡಿತ ಇವುಗಳ ಬಗ್ಗೆ ವಿದ್ಯಾರ್ಥಿಗಳು ಕಾಳಜಿ ವಹಿಸಬೇಕು. ಮಾಧ್ಯಮರಂಗದ ಯಾವುದೇ ಭಾಗವನ್ನು ಪ್ರವೇಶಿಸಿದರೂ ಯಶಸ್ಸು ಕಾಣಬಹುದು. ಬದಲಾಗುತ್ತಿರುವ ಮಾಧ್ಯಮರಂಗ ಬಯಸುವ ಕೌಶಲಗಳನ್ನು ಅರ್ಥಮಾಡಿಕೊಳ್ಳಬೇಕು ಎಂದರು.

    ಉಪನ್ಯಾಸಕ ಡಾ. ಪೃಥ್ವಿರಾಜ ಟಿ. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿಯನ್ನು ಪರಿಚಯಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಪ್ರಾಧ್ಯಾಪಕ ಡಾ.ಕುಮಾರಸ್ವಾಮಿ ಬಿ. ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕಿ ಡಾ.ಅನಸೂಯ ಕೆ. ವಿ. ವಂದಿಸಿದರು. ಉಪನ್ಯಾಸಕರಾದ ವಿನಯ್ ಕುಮಾರ್ ಎಸ್.ಎಸ್., ಡಾ. ಗಿರಿಜಮ್ಮ ಜಿ. ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    ತುಮಕೂರಿನಲ್ಲಿ ತುಮುಲ್ ನೇಮಕಾತಿ ವಿವಾದಕ್ಕೆ ಹೊಸ ತಿರುವು; 31 ಅಭ್ಯರ್ಥಿಗಳಿಂದ ಕಾನೂನು ಹೋರಾಟಕ್ಕೆ ಸಿದ್ಧತೆ!

    October 25, 2026

    ತುಮಕೂರಿನಲ್ಲಿ ಚಿರತೆ ಹಿಡಿಯಲು ಹೋದ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರಿಂದಲೇ ಅಡ್ಡಿ? 15 ಮಂದಿ ವಿರುದ್ಧ ಪೊಲೀಸ್ ಪ್ರಕರಣ!

    October 25, 2026

    Comments are closed.

    Our Picks

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ!  ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ ಇಲ್ಲಿದೆ

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಪೋಲಿಯೋ ಮುಕ್ತ ಭಾರತ ನಿರ್ಮಾಣದಲ್ಲಿ ರೋಟರಿ ಇಂಟರ್‌ ನ್ಯಾಷನಲ್ ಪ್ರಮುಖ ಪಾತ್ರ: ರೋಟರಿ ಅಧ್ಯಕ್ಷ ಪ್ರಕಾಶ್ ಕೆ.

    October 25, 2026

    ತಿಪಟೂರು: ತಿಪಟೂರು ರೋಟರಿ ಕ್ಲಬ್ ಹಾಗೂ ಎನ್.ಆರ್.ಪಿ.ಯು. ಅಕಾಡೆಮಿ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪೋಲಿಯೋ ದಿನದ ಅಂಗವಾಗಿ “ಪೋಲಿಯೋ…

    ತಿಪಟೂರು: ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದ ಬಿ.ಎಸ್.ಉಮಾಶಂಕರ್!

    October 25, 2026

    ಬಸವರಾಜ್ ಕನ್ನಾಳೆಗೆ ತುಮಕೂರು ವಿವಿಯಿಂದ ಶಾಕ್‌; ಸಿಂಡಿಕೇಟ್ ಸ್ಥಾನದಿಂದ ವಜಾ

    October 25, 2026

    BHEL ನೇಮಕಾತಿ 2026: 660 ಹುದ್ದೆಗಳಿಗೆ ಅರ್ಜಿ ಆಹ್ವಾನ, 10ನೇ ತರಗತಿ ಹಾಗೂ ಐಟಿಐ ಪಾಸಾದವರಿಗೆ ಅವಕಾಶ!

    October 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.