nammatumakuru

    Subscribe to Updates

    Get the latest creative news from FooBar about art, design and business.

    What's Hot

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
    • 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
    • ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
    • ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
    • ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
    • ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಲು ರೈತರಿಗೆ ಸಲಹೆ
    ತುಮಕೂರು May 20, 2025

    ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಲು ರೈತರಿಗೆ ಸಲಹೆ

    By adminMay 20, 2025No Comments2 Mins Read
    compound fertilizers

    ತುಮಕೂರು: ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ 17 ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಸ್ವಾಭಾವಿಕವಾಗಿ ದೊರೆಯುವ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತದೆ.
    ಸಸ್ಯಗಳಿಗೆ ಪ್ರಧಾನ ಪೋಷಕಾಂಶಗಳಾದ ಸಾರಜನಕ, ರಂಜಕ, ಪೋಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಹಾಗೂ ಲಘು ಪೋಷಕಾಂಶಗಳಾದ ಕಾಲ್ಸಿಯಂ, ಮೆಗ್ನಿಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬ್ಡಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಅಗತ್ಯವಿರುತ್ತದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗಿರುತ್ತದೆ.

    ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದ ಎಲ್ಲಾ ಪೋಷಕಾಂಶಗಳು ಬೇಕಾದ ಪ್ರಮಾಣದಲ್ಲಿ ಬೆಳೆಗಳಿಗೆ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ, ಹಿಂಡಿ ಇತ್ಯಾದಿ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕು. ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು, ಅವುಗಳ ಬಳಕೆ ಅಗತ್ಯವಾಗಿರುವ ಹಿನ್ನೆಲೆಯಲ್ಲಿ ರೈತರು ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಬೇಕೆಂದು ಕೃಷಿ ಇಲಾಖೆ ಸಲಹೆ ನೀಡಿದೆ.


    Provided by
    Provided by

    ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿಯನ್ನು ರೂಢೀಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರ ಇರುತ್ತದೆ. ಆದರೆ ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಶ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಶ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ.

    ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ: ರಂಜಕ: ಪೊಟ್ಯಾಶ್ ರಸಗೊಬ್ಬರಗಳನ್ನು 4:2:1ರ ಅನುಪಾತದಲ್ಲಿ ಬಳಸಬೇಕು. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5:3:1 ಆಗಿರುತ್ತದೆ. ಆದ್ದರಿಂದ ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಪೊಟ್ಯಾಶ್ ಯುಕ್ತ ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯವಾಗಿದೆ.

    ಅಲ್ಲದೆ ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ.ಎ.ಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೋಟ್ಯಾಶ್ ಒದಗಿಸುವ ಇತರೆ ಸಂಯುಕ್ತ ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 14:35:14, 17:17:17, 14:28:14, 19:19:19, 20:10:10ನ್ನು ಸಹ ಬಳಸಬಹುದಾಗಿದೆ ಎಂದು ಕೃಷಿ ಇಲಾಖೆ ಸಲಹೆ ನೀಡಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    ————————————

    admin
    • Website

    Related Posts

    ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

    June 11, 2026

    ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ

    June 10, 2026

    ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು

    June 10, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    ಬೆಂಗಳೂರು: ಬೆಂಗಳೂರಿನ ಕಸದ ಟೆಂಡರ್‌ನಲ್ಲಿ 10 ಸಾವಿರ ಕೋಟಿ ರೂಪಾಯಿ ಕಿಕ್ ಬ್ಯಾಕ್ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ…

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.