nammatumakuru

    Subscribe to Updates

    Get the latest creative news from FooBar about art, design and business.

    What's Hot

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026
    Facebook Twitter Instagram
    ಟ್ರೆಂಡಿಂಗ್
    • 14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR
    • ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ
    • ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!
    • ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ
    • ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ: ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್‌
    • ಮನೆಗೆ ಮರು ಪೇಂಟಿಂಗ್ ಮಾಡಿಸುವಾಗ ಈ ತಪ್ಪುಗಳನ್ನು ಮರೆತೂ ಮಾಡಬೇಡಿ!
    • ತುಮಕೂರು: ಎಸ್ ಐಆರ್ ಗೊಂದಲ, ಹೆಲ್ಪ್ ಲೈನ್ ಗೆ ಚಾಲನೆ ನೀಡಿದ ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ
    • ತುಮಕೂರು: ಮಕ್ಕಳ ಜನನ ಪ್ರಮಾಣಪತ್ರ ಲೋಪದೋಷ ನಿವಾರಣೆಗೆ ಸರ್ಕಾರಿ ಆದೇಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಳೆರಾಯನ ಆರ್ಭಟಕ್ಕೆ ಬಡ ಕುಟುಂಬಗಳು ಬೀದಿಪಾಲು: ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಸಂಕಷ್ಟಕ್ಕೆ ಸಿಲುಕಿದ ನಾಲ್ಕು ಕುಟುಂಬಗಳು
    ಕೊರಟಗೆರೆ May 20, 2025

    ಮಳೆರಾಯನ ಆರ್ಭಟಕ್ಕೆ ಬಡ ಕುಟುಂಬಗಳು ಬೀದಿಪಾಲು: ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಸಂಕಷ್ಟಕ್ಕೆ ಸಿಲುಕಿದ ನಾಲ್ಕು ಕುಟುಂಬಗಳು

    koratagere
    By adminMay 20, 2025No Comments3 Mins Read
    koratagere

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ: ಪೂರ್ವ ಮುಂಗಾರು ಸತತ ಮೂರ್ನಾಲ್ಕು ಸಹಿತ ದಿನಗಳಿಂದ ಗುಡುಗು ಸಹಿತ ಮಳೆಯಿಂದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರಿಗೆ ಅವಾಂತರ ಸೃಷ್ಟಿಸಿ ಇಡೀ ರಾತ್ರಿ ಮಳೆ ನೀರು ಹೊರ ಹಾಕುವ ಮೂಲಕ 4 –5 ಕುಟುಂಬಗಳು ಹೈರಾಣಾದ ಘಟನೆ ತಾಲೂಕಿನ ಅರಸಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನಡೆದಿದೆ.

    ಕೊರಟಗೆರೆ ತಾಲೂಕಿನ ಗಡಿ ಭಾಗದ ಅರಸಾಪುರ ಗ್ರಾಮದಲ್ಲಿ ಇತ್ತೀಚಿಗೆ ಸುರಿದ ಭಾರೀ ಮಳೆಗೆ ಚರಂಡಿ ಹಾಗೂ ರಸ್ತೆಯಲ್ಲಿ ಹರಿಯಬೇಕಾದ ಕೊಳಚೆ ನೀರು ಮನೆ ಒಳಗೆ ನುಗ್ಗಿ ಮನೆ ಗೃಹಪಯೋಗಿ ವಸ್ತುಗಳು ಸೇರಿದಂತೆ ದಿನಬಳಕೆ ವಸ್ತುಗಳು ನಾಶವಾಗಿ ಸಾರ್ವಜನಿಕರು ಮಳೆ ನೀರು ಹೊರ ಹಾಕುವುದರಲ್ಲಿ ಇಡೀ ರಾತ್ರಿ ಕಳೆದು ವ್ಯವಸ್ಥೆಯ ವಿರುದ್ಧ ಇಡೀ ಶಾಪ ಹಾಕಿದ ಘಟನೆ ಜರುಗಿದೆ.

    ಅರಸಾಪುರ ಗ್ರಾಮದಲ್ಲಿ ಮಳೆಯ ಪ್ರಮಾಣ ಹೆಚ್ಚಾದರೆ ರಸ್ತೆ ಹಾಗೂ ಚರಂಡಿ ನೀರು ನಾಲ್ಕೈದು ಮನೆಗಳಿಗೆ ನುಗ್ಗುವುದು ಸಾಮಾನ್ಯವಾಗಿದ್ದು, ಕಷ್ಟದಿಂದ ಕೂಲಿ ನಾಲಿ ಮಾಡಿ ಸಂಪಾದಿಸಿದ ಅಲ್ಪಸ್ವಲ್ಪ ದಿನಸಿ ಹಾಗೂ ದಿನ ಬಳಕೆ ವಸ್ತುಗಳು ಮಳೆ ನೀರಿನಿಂದ ಹಾಳಾಗುತ್ತಿದ್ದು, ಇಡೀ ರಾತ್ರಿ ನಿದ್ರೆ ಇಲ್ಲದೆ ನೀರನ್ನು ಹೊರ ಹಾಕುವುದರಲ್ಲಿಯೇ ಇಡೀ ರಾತ್ರಿ ಕಳೆಯುವ ಅನಿವಾರ್ಯತೆ ಒದಗಿದ್ದು ಗ್ರಾಮ ಪಂಚಾಯಿತಿ ವ್ಯವಸ್ಥಿತವಾಗಿ ಚರಂಡಿ ನಿರ್ಮಾಣ ಮಾಡದೆ ಹಾಗೂ ಚರಂಡಿ ಶುದ್ದಿಗೊಳಿಸದೇ ಇರುವುದರಿಂದ ಈ ದುಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಗ್ರಾಮ ಪಂಚಾಯಿತಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಅರಸಾಪುರ ಹಾಗೂ ಹೊಸಪಾಳ್ಯ ಸಂಪರ್ಕ ಕಲ್ಪಿಸುವಂತಹ ಬಂಡಿದಾರಿ ಸಂಪರ್ಕದ ಆಸುಪಾಸಿನಲ್ಲಿರುವ ಮನೆಗಳಿಗೆ ಮಳೆ ಸುರಿವ ಸಂದರ್ಭದಲ್ಲಿ ರಸ್ತೆ ಹಾಗೂ ಜಮೀನಿನ ಮೇಲ್ಭಾಗದಿಂದ ಬರುವಂತಹ ನೀರು ವೇಗವಾಗಿ ಬಂದು ಚರಂಡಿ ವ್ಯವಸ್ಥೆ ಇಲ್ಲದ ಕಾರಣ ನೇರವಾಗಿ ಸಾರ್ವಜನಿಕರ ಮನೆಗಳಿಗೆ ನುಗ್ಗುವುದು ಸಾಮಾನ್ಯವಾಗಿದ್ದು, ಎರಡು ಮೂರು ಕುಟುಂಬಗಳ ಮನೆಗೆ ಮಳೆ ನೀರು ನುಗ್ಗಿ ಇಡೀ ರಾತ್ರಿ ನಿದ್ರಿಸಲಾಗದೆ ಕುಟುಂಬ ನೀರು ಹೊರ ಹಾಕುವುದರಲ್ಲಿಯೇ ಇಡೀ ರಾತ್ರಿ ಕಳೆದು ವ್ಯವಸ್ಥೆಯ ವಿರುದ್ಧ ಇಡೀ ಶಾಪ ಹಾಕಿದ್ದಾರೆ.

    ಹೈವೇ ಕಾಮಗಾರಿಯಿಂದ ಅವಾಂತರ ಸೃಷ್ಟಿ:

    ನ್ಯಾಷನಲ್ ಹೈವೇ 69 ಅವೈಜ್ಞಾನಿಕ ಕಾಮಗಾರಿಯಿಂದ ನ್ಯಾಷನಲ್ ಹೈವೇ ರಸ್ತೆ ಬದಿಯ ಚರಂಡಿ ಸಮರ್ಪಕವಾಗಿ ಗ್ರಾಮದ ನೀರು ಹೊರಹೋಗದೆ ಇರುವುದರಿಂದ ಬಹಳಷ್ಟು ಮನೆಗಳಿಗೆ ನೀರು ನುಗ್ಗುವಂತಾಗಿದ್ದು, ಮಳೆ ಬಂದರೆ ಈ ಗ್ರಾಮದ ಬಹಳಷ್ಟು ಮನೆಗಳಿಗೆ ಮಳೆ ನೀರು ನುಗ್ಗಲಿದ್ದು, ಶಾಶ್ವತ ಪರಿಹಾರ ದೊರಕದಿದ್ರೆ ಇಡೀ ವರ್ಷ ಮಳೆಗಾಲದಲ್ಲಿ ಮಳೆ ಬರುವ ಸಂದರ್ಭದಲ್ಲಿ ಇಲ್ಲಿನ ಬಹಳಷ್ಟು ಕುಟುಂಬಗಳು ಹೈರಾಣಾಗುವುದು ಸರ್ವೇ ಸಾಮಾನ್ಯವಾಗಿದೆ.

    ಅಂಗವಿಕಲರ ನರಳಾಟ ಕೇಳೋರು ಯಾರು.?

    ಅನಾಥ ಮನೆ, ದುಡಿಯುವ ಯಜಮಾನ ಇತ್ತೀಚಿಗಷ್ಟೇ ಮರಣ ಹೊಂದಿ ಅಂಗವಿಕಲ ಮಹಿಳೆ ಮತ್ತೋರ್ವ ಅಂಗವಿಕಲ ಮಾವ ಕುಟುಂಬದ ಜವಾಬ್ದಾರಿ ಹೊತ್ತ ಮಹಿಳೆ ಅಂಗವಿಕಲೆಯಾಗಿದ್ದು, ಈಕೆಯ ಮನೆಗೆ ಪ್ರತಿ ಬಾರಿಯೂ ಮಳೆಯ ಬಂದಾಗೆಲ್ಲ ಮಳೆ ನೀರು ಮನೆಯೊಳಗೇ ನುಗ್ಗಿ , ಅದು ಚರಂಡಿಯ ನೀರು ಮನೆಗೆ ನುಗ್ಗುವುದರಿಂದ ಇಡೀ ಕುಟುಂಬ ಸಂಕಷ್ಟದಲ್ಲಿ ಮುಳುಗಿದ್ದು, ದಿನಬಳಕೆ ವಸ್ತುಗಳು ಸೇರಿದಂತೆ ದಿನಸಿ ಸಾಮಗ್ರಿಗಳು ಮಳೆ ನೀರಿಗೆ ನೆಂದು ಹಾಳಾಗಿ ಇಡೀ ಕುಟುಂಬ ಮಳೆ ನೀರು ಹೊರ ಹಾಕುವುದೇ ಕಾಯಕವಾಗಿದೆ. ರಾತ್ರಿ ಇಡೀ ನಿದ್ದೆ ಇಲ್ಲದೆ ಪರಿತಪಿಸಿ ಇಡಿ ವ್ಯವಸ್ಥೆಯ ವಿರುದ್ಧ ಇಡೀ ಶಾಪ ಹಾಕುತ್ತಿದ್ದಾರೆ, ಗ್ರಾಮ ಪಂಚಾಯತಿಯವರು ಸಮರ್ಪಕವಾಗಿ ಚರಂಡಿ ಶುದ್ದಿಗೊಳಿಸದೆ ಮಳೆ ನೀರು ಮನೆಗೆ ನುಗ್ಗಲಿದೆ ಎಂದು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

    ನಮ್ಮ ಮನೆಗೆ ನಾನೇ ಆಧಾರ ಸ್ತಂಭ ಅದರಲ್ಲೂ ನಾನು ಅಂಗವಿಕಲೆ ಇತ್ತೀಚಿಗಷ್ಟೇ ನನ್ನ ಗಂಡ ಮರಣ ಹೊಂದಿದ್ದಾರೆ, ನಮ್ಮ ಭಾವ ಸಹ ಅಂಗವಿಕಲ, ನನಗೆ ಇಬ್ಬರು ಮಕ್ಕಳಿದ್ದಾರೆ. ಪ್ರತಿ ಬಾರಿಯ ಮಳೆಗಾಲದಲ್ಲೂ ಚರಂಡಿ ನೀರು ಮನೆಗೆ ನುಗ್ಗಿ ನಮ್ಮ ಕುಟುಂಬವನ್ನು ಮೂರಾಬಟ್ಟೆ ಮಾಡಲಿದೆ, ತಿನ್ನುವ ಅನ್ನಕ್ಕೂ ಪರಿತಪಿಸುವಂತಹ ನಮ್ಮ ಕುಟುಂಬಕ್ಕೆ ಮಳೆ ಬಂದಾಗೆಲ್ಲ ಮಳೆ ನೀರು ಮನೆಗೆ ನುಗ್ಗಿ ಅವಾಂತರ ಸೃಷ್ಟಿಸಿ ನಮ್ಮ ಕುಟುಂಬವನ್ನು ಮೂರಾ ಬಟ್ಟೆ ಮಾಡಲಿದೆ.

    — ರಂಗಮ್ಮ, ಸ್ಥಳೀಯ ಮಹಿಳೆ.


    ಅರಸಾಪುರದಿಂದ ಹೊಸಪಾಳ್ಯಕ್ಕೆ ಹೋಗುವ ಬಂಡಿ ಜೋಡಿ ರಸ್ತೆಯ ಪಕ್ಕದಲ್ಲಿರುವ ನಮ್ಮ ಮನೆಗೆ ರಸ್ತೆ ನಿರ್ಮಾಣ ಮಾಡುವ ಸಂದರ್ಭದಲ್ಲಿ ಎರಡು ಬದಿಯಲ್ಲಿ ಚರಂಡಿ ನಿರ್ಮಿಸದೆ ಅವೈಜ್ಞಾನಿಕವಾಗಿ ಕಾಮಗಾರಿ ನಿರ್ವಹಿಸುವುದರಿಂದ ಪ್ರತಿ ಬಾರಿ ಮಳೆಯಲ್ಲೂ ಮನೆಗೆ ಮಳೆ ನೀರು ನುಗ್ಗಿ ದಿನಸಿ ಸಾಮಗ್ರಿಗಳು ಸೇರಿದಂತೆ ದಿನ ಬಳಕೆ ವಸ್ತುಗಳು ಹಾಳಾಗಿ ಬಡ ಕುಟುಂಬದ ಮೇಲೆ ಗಾಯದ ಮೇಲೆ ಬರೆ ಎಳೆದಂತಾಗಿ ಇಡೀ ನಮ್ಮ ಕುಟುಂಬ ಸಂಕಷ್ಟದಲ್ಲಿ ಮುಳುಗಲಿದೆ, ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು ಪ್ರಯೋಜನವಾಗಿಲ್ಲ.

    — ಲಕ್ಷ್ಮೀಶ,  ಸ್ಥಳೀಯ ಯುವಕ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    ಕೊರಟಗೆರೆ: ಬುಗುರಿ ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ಸಾವು

    July 11, 2026

    ಕೋಟಾಗುಡ್ಡದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಚೇತನ್ ಬಾಬು ಸ್ಪಂದನೆ: ಟ್ಯಾಂಕರ್ ಮೂಲಕ ನೀರು ಪೂರೈಕೆ

    July 9, 2026

    ತೋವಿನಕೆರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮನೆ ಸೈಟ್ ಹಂಚಿಕೆಯಲ್ಲಿ ಅಕ್ರಮ: ಗ್ರಾಮ ಪಂಚಾಯಿತಿ ಕಚೇರಿಗೆ ಮುತ್ತಿಗೆ

    July 8, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    14 ವರ್ಷದ ಬಾಲಕಿ ತಾಯಿಯಾದ ಪ್ರಕರಣ; ಪೋಕ್ಸೋ ಕೇಸ್ ದಾಖಲು: ನಾಲ್ವರು ವೈದ್ಯರ ವಿರುದ್ಧವೂ FIR

    July 13, 2026

    ಹುಬ್ಬಳ್ಳಿ: 14 ವರ್ಷದ ಅಪ್ರಾಪ್ತ ಬಾಲಕಿಯೋರ್ವಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆರಗುಗೊಳಿಸುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ…

    ಸರ್ಕಾರದ ಚಿತಾವಣೆಯಿಂದ ಬಿಡದಿ ಟೌನ್‌ ಶಿಪ್‌ ಗೆ ಸರ್ವೆ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

    July 13, 2026

    ಬಿಡದಿ ಟೌನ್‌ ಶಿಪ್‌ ಜಟಾಪಟಿ: ಸರ್ವೆಗೆ ಬಂದ ಅಧಿಕಾರಿಗಳಿಗೆ ರೈತರಿಂದ ಪೊರಕೆ ಏಟು!

    July 13, 2026

    ಸರಗೂರು: ವಿದ್ಯಾರ್ಥಿಗಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶಂಭುಮೂರ್ತಿ

    July 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.