ತುಮಕೂರು: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯ ನಿರ್ವಹಿಸುತ್ತಿರುವ ನಗರದ ವೀರಸಾಗರ ಬಡಾವಣೆಯ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ 2025–26ನೇ ಸಾಲಿಗೆ 1 ರಿಂದ 5ನೇ ತರಗತಿಯಲ್ಲಿ ಖಾಲಿಯಿರುವ ಸ್ಥಾನಗಳಿಗೆ ಪ್ರವೇಶ ಕಲ್ಪಿಸಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ವಸತಿ ಮುಖ್ಯ ಶಿಕ್ಷಕರಿಗೆ ಮೇ 31ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್–01, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ತುಮಕೂರು ತಾಲ್ಲೂಕು ಅಥವಾ ಮೊ.ಸಂ. 9480843205/ 9141557734ನ್ನು ಸಂಪರ್ಕಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕ(ಗ್ರೇಡ್–01)ರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW