ಬೆಂಗಳೂರು: ಬೆಂಗಳೂರು ಮೆಟ್ರೋ ರೈಲಿನಲ್ಲಿ ಮಹಿಳಾ ಪ್ರಯಾಣಿಕರ ವಿಡಿಯೋ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಅಸಭ್ಯ ಫೋಟೋ ಹಾಗೂ ವಿಡಿಯೋಗಳನ್ನು ರಹಸ್ಯವಾಗಿ ಸೆರೆ ಹಿಡಿದು ಸೋಶಿಯಲ್ ಮೀಡಿಯಾ ಪೇಜ್ ಗಳಲ್ಲಿ ಪೋಸ್ಟ್ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ಮಧ್ಯಾಹ್ನ ಆರೋಪಿಯನ್ನು ಆತನ ಮನೆಯಿಂದ ಬಂಧಿಸಲಾಗಿದೆ ಎಂದು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಲೋಕೇಶ್ ಬಿ ಜಗಲಾಸರ್ ತಿಳಿಸಿದ್ದಾರೆ.
ಬಂಧಿತನನ್ನು 27 ವರ್ಷದ ದಿಗಂತ ಎಂದು ಗುರುತಿಸಲಾಗಿದೆ. ಆರೋಪಿ ದಿಗಂತ್ ಉತ್ತರ ಬೆಂಗಳೂರಿನ ತಿಗಳರಪಾಳ್ಯದ ನಿವಾಸಿಯಾಗಿದ್ದಾನೆ.
ವಾಣಿಜ್ಯ ಪದವೀಧರನಾಗಿರುವ ಈತ ಮುರುಗೇಶಪಾಳ್ಯದ ಖಾಸಗಿ ಕಂಪನಿಯಲ್ಲಿ ಖಾತೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW