ತುರುವೇಕೆರೆ : ಬಸವ ಜಯಂತಿಯ ಅಂಗವಾಗಿ ಆಪರೇಷನ್ ಸಿಂಧೂರದ ವೀರ ಯೋಧರಿಗೆ ಬಲ ನೀಡುವ ನಿಟ್ಟಿನಲ್ಲಿ ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ ಆಚರಿಸಲಾಗುವುದು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ತುರುವೇಕೆರೆ ತಾಲೂಕು ಘಟಕದ ಅಧ್ಯಕ್ಷ ಎಸ್.ಎಂ.ಕುಮಾರಸ್ವಾಮಿ ಅವರು ತಿಳಿಸಿದರು.
ಮಾಯಸಂದ್ರ ರಸ್ತೆಯಲ್ಲಿರುವ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನಾಂಕ 29–05–2025ರ ಗುರುವಾರ ತುರುವೇಕೆರೆ ಪಟ್ಟಣದಲ್ಲಿ ಬಸವ ಜಯಂತಿ ಮತ್ತು ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮವನ್ನು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ವತಿಯಿಂದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಬೆಳಗ್ಗೆ 7:30ಕ್ಕೆ ಪೂಜಾ ಕಾರ್ಯಕ್ರಮ ಮತ್ತು 11 ಗಂಟೆಗೆ ಧಾರ್ಮಿಕ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಶಾಸಕರಾದ ಎಂ.ಟಿ.ಕೃಷ್ಣಪ್ಪನವರು ನೆರವೇರಿಸಲಿದ್ದಾರೆ ಎಂದು ತಿಳಿಸಿದರು.
ದಿವ್ಯ ಸಾನಿಧ್ಯವನ್ನು ವಿರಕ್ತ ಮಠದ ಶ್ರೀ ಶ್ರೀ ಕರಿ ವೃಷಭ ದೇಶಿ ಕೇಂದ್ರ ಮಹಾಸ್ವಾಮೀಜಿಯವರು ವಹಿಸಲಿದ್ದು, ಗುಬ್ಬಿ ತಾಲೂಕಿನ ಗೊಲ್ಲಹಳ್ಳಿಯ ಶ್ರೀ ಸಿದ್ದಲಿಂಗೇಶ್ವರ ಮಹಾಸಂಸ್ಥಾನದ ಶ್ರೀಗಳಾದ ಡಾ.ಶ್ರೀ ಶ್ರೀ ವಿಭವ ವಿದ್ಯಾಶಂಕರ ದೇಶಿ ಕೇಂದ್ರ ಮಹಾಸ್ವಾಮಿಜಿಗಳು ಆಶೀರ್ವದಿಸಲಿದ್ದಾರೆ ಎಂದು ತಿಳಿಸಿದರು.
ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದ ಉನ್ನತೀಕರಣ ಮತ್ತು ಅಭಿವೃದ್ಧಿಗಾಗಿ ಸಹಾಯ ಹಸ್ತ ನೀಡಿದ ಕ್ಷೇತ್ರದ ನಿಕಟ ಪೂರ್ವ ಶಾಸಕರಾದ ಮಸಾಲ ಜಯ ರಾಮ್ ರವರನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಮಾಜದ ಹಿರಿಯ ಮುಖಂಡರು ಭಾಗವಹಿಸಲಿದ್ದು, ತಾಲೂಕಿನ ಎಲ್ಲಾ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ತಾಲೂಕಿನ ವೀರಶೈವ ಮಹಾಸಭಾ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ.ತುರುವೇಕೆರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW