ಹಾಸನ: ವಿರಾಜಪೇಟೆ ಕಾಂಗ್ರೆಸ್ ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ 35 ವರ್ಷದ ಶೃತಿ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ಪಿಡಬ್ಲ್ಯೂಡಿ ಕ್ವಾಟರ್ಸ್ನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶೃತಿ ಮನೆಯಲ್ಲಿಯೇ ವಿಷ ಸೇವಿಸಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಹೀಗಾಗಿ ಅವರನ್ನು ಹಾಸನದ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW