ತುಮಕೂರು: ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಇಂಗ್ಲಿಷ್ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಜಿ.ದಾಕ್ಷಾಯಿಣಿ ನೇಮಕಗೊಂಡಿದ್ದಾರೆ.
ಅವರು ಕಳೆದ ಮೂರು ವರ್ಷಗಳಿಂದ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದ ಪ್ರೊ. ಬಿ. ಕರಿಯಣ್ಣ ಅವರಿಂದ ಅಧಿಕಾರ ಸ್ವೀಕರಿಸಿದರು.
ದಾಕ್ಷಾಯಿಣಿಯವರು 29 ವರ್ಷಗಳ ಬೋಧನಾನುಭವ ಹೊಂದಿದ್ದು, ಕಲಾ ಕಾಲೇಜಿನಲ್ಲಿ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಎಲ್‍ಎಲ್‍ಬಿ, ಎಂ.ಫಿಲ್. ಹಾಗೂ ಪಿಎಚ್.ಡಿ ಪದವಿ ಪಡೆದಿರುತ್ತಾರೆ. ಅವರು ಪ್ರಸಿದ್ಧ ಕ್ಷಯರೋಗ ಹಾಗೂ ಹೃದ್ರೋಗ ತಜ್ಞ ಡಾ. ಗುರುಮಹದೇವಯ್ಯ ಹಾಗೂ ವೈದ್ಯೆ ಡಾ. ಎಂ. ಅನಸೂಯ ಅವರ ಪುತ್ರಿ.
ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನ ಪ್ರಾಂಶುಪಾಲರಾಗಿ ನೇಮಕಗೊಂಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಡಾ. ದಾಕ್ಷಾಯಿಣಿ ಇದಕ್ಕಾಗಿ ವಿಶ್ವವಿದ್ಯಾನಿಲಯಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW