ಬೆಳಗಾವಿ: ಕಾರ್ಮಿಕರ ಮೇಲೆ ಟ್ಯಾಂಕರ್ ಹರಿದು ಮೂವರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್ನ ರಾಷ್ಟ್ರೀಯ ಹೆದ್ದಾರಿ 4ರ ಪುಣೆ–ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಕಲಬುರಗಿ ಜಿಲ್ಲಯ ಚಿಂಚೋಳಿ ತಾಲೂಕಿನ ಶಿರೋಳಿ ಗ್ರಾಮದ ರಾಮಚಂದ್ರ ಜಾಧವ್ (45), ಮಗ ಮಹೇಶ್ ರಾಮಚಂದ್ರ ಜಾಧವ್ (18), ರಾಮಣ್ಣ ಅಲಿಯಾಸ್ ರಮೇಶ್ (38) ಮೃತಪಟ್ಟ ಕಾರ್ಮಿಕರಾಗಿದ್ದಾರೆ. ಮೃತ ರಾಮಚಂದ್ರ ಪತ್ನಿ ಲಕ್ಷ್ಮೀಬಾಯಿ, ಅನುಶ್ರೀ, ಮೃತ ರಾಮಣ್ಣನ ಪತ್ನಿ ಭೀಮವ್ವ (55) ಗಂಭೀರವಾಗಿ ಗಾಯಗೊಂಡಿದ್ದಾರೆ.
ಎನ್ ಹೆಚ್ ಎಐನಲ್ಲಿ ದಿನಗೂಲಿ ಕೆಲಸಕ್ಕಾಗಿ ಕಲಬುರಗಿಯ ಕಲಬುರಗಿಯ ಶಹಬಾದ್, ಸೇಡಂ, ಚಿಂಚೋಳಿಯಿಂದ ಬಂದಿದ್ದರು. ಭಾನುವಾರ ಬೆಳಿಗ್ಗೆ ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯಿಲ್ ತುಂಬಿದ್ದ ಟ್ಯಾಂಕರ್ ಏಕಾಏಕಿ ಹರಿದು, ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್ ನಲ್ಲಿ ಸಿಲುಕಿದ್ದ ಚಾಲಕನನ್ನು ಪೊಲೀಸರು ಹೊರ ತೆಗೆದಿದ್ದಾರೆ. ಟ್ಯಾಂಕರ್ ಚಾಲಕ ದಿನೇಶ್ ಶೆಟ್ಟಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿತ್ತೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW