ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹೋರಾಟಗಾರರ ಮೇಲೆ ಎಫ್ ಐಆರ್ ದಾಖಲು ಹಿನ್ನಲೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ನವಚೇತನ್ ಸೇರಿ ನಾಲ್ವರನ್ನು ಗುಬ್ಬಿ ಪೊಲೀಸರಿಂದ ಬಂಧನವಾಗಿದೆ. ನವಚೇತನ್, ಯುವಮೋರ್ಚಾ ಅಧ್ಯಕ್ಷ, ಚೇತನ್ ಬೊಮ್ಮರನಹಳ್ಳಿ, ಬೆಣಚಗೆರೆ ಲೋಕಿ, ಹಾಗೂ ಕೌಶೀಕ್, ಸಿ.ಎಸ್ ಪುರ ಬಂಧನ ಮಾಡಲಾಗಿದೆ.
ನಾಲ್ವರ ವಿರುದ್ಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕಳೆದ ಶನಿವಾರ ನಡೆದ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟದಲ್ಲಿ ಭಾಗಿಯಾಗಿದ್ದ ನಾಲ್ವರು ಆಗಿದ್ದಾರೆ.
ನಾಲ್ವರನ್ನು ಪೊಲೀಸರು ಬಂಧಿಸಿ ಗುಬ್ಬಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW