nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ

    November 15, 2025

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ
    • ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ
    • ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ
    • ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  
    • ಮಕ್ಕಳಿಲ್ಲದ ಕೊರಗು ಬಿಟ್ಟು ಮರಗಳಿಗೆ ತಾಯಿಯಾದ ದೈವ ಸ್ವರೂಪಿ “ತಿಮ್ಮಕ್ಕ”
    • ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ 
    • ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
    • ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜೂ.8ರಂದು ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದಲ್ಲಿ 19ನೇ ವಾರ್ಷಿಕೋತ್ಸವ
    ಕೊರಟಗೆರೆ June 3, 2025

    ಜೂ.8ರಂದು ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದಲ್ಲಿ 19ನೇ ವಾರ್ಷಿಕೋತ್ಸವ

    By adminJune 3, 2025No Comments2 Mins Read
    koratagere

    ಕೊರಟಗೆರೆ : ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ 19ನೇ ವರ್ಷದ ವಾಷಿಕೋತ್ಸವ ಅಂಗವಾಗಿ ಜೂ.8ರಂದು ಶ್ರೀಜಗದ್ಗುರು ರೇಣುಕಾಚಾರ್ಯರ, ಶ್ರೀಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಹಾಗೂ ಸಾಮೂಹಿಕ ವಿವಾಹಗಳು. ಜನ ಜಾಗೃತಿ ಧರ್ಮ ಸಮಾರಂಭ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ವೀರಭದ್ರ ಶಿವಾಚಾರ್ಯ ಮಹಾ ಸ್ವಾಮೀಜಿ ತಿಳಿಸಿದರು.

    ಪಟ್ಟಣದ ಶ್ರೀಬಸವೇಶ್ವರ ದೇವಾಲಯದಲ್ಲಿ ಸಿದ್ದರಬೆಟ್ಟ ಶ್ರೀಮಠದಿಂದ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.


    Provided by
    Provided by

    ಪ್ರತಿವರ್ಷದಂತೆ ಈ ವರ್ಷವು ಸಹ ಮಠದ ವಾರ್ಷಿಕೋತ್ಸವದ ಅಂಗವಾಗಿ ಜೂ.6ರಿಂದ 8ರವರೆಗೆ ಮೂರು ದಿನಗಳ ಕಾಲ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ನಡೆಯಲಿವೆ. ಮೊದಲ ದಿನ(ಜೂ.6) ಗಂಗಾ ಪೂಜೆ, ಗಣಪತಿಪೂಜೆ, ಪುಣ್ಯಾಹ ನಾಂದಿ, ಪಂಚ ಕಳಸ ಸ್ಥಾಪನೆ, ನವಗ್ರಹ ಮತ್ತು ಶ್ರೀರುದ್ರ ಹೋಮ, ಎರಡನೇ ದಿನ  (ಜೂನ್ 7 ) ರಾಜ್ಯದ ಹಲವು ಶ್ರೀಮಠದ ದಿವ್ಯ ಸಾನಿದ್ಯದಲ್ಲಿ ಪುಸ್ತಕ ದಾಸೋಹ ಸಮಾರಂಭ ನಡೆಯಲಿದೆ ಎಂದು ಹೇಳಿದರು.

    ಮೂರನೇ ದಿನ(ಜೂ.8) ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀಕ್ಷೇತ್ರನಾಥ ಸಿದ್ದೇಶ್ವರ ಸ್ವಾಮಿ, ಮಹಾಗಣಪತಿ, ಶ್ರೀಜಗದ್ಗುರು ರೇಣುಕಾಚಾರ್ಯರ ಹಾಗೂ ಶ್ರೀವೀರಭದ್ರ ಸ್ವಾಮಿಗೆ ಮಹಾ ರುದ್ರಾಭಿಷೇಕ ಹಾಗೂ ಬಿಲ್ಬಾರ್ಚನೆ, ಉಚಿತ ಸಾಮೂಹಿಕ ದೀಕ್ಷಾ ಸಮಾರಂಭ, ಬೆ.7:30ಕ್ಕೆ ಪಲ್ಲಕ್ಕಿ ಉತ್ಸವ ನಂತರ 15ಕ್ಕೂ ಹೆಚ್ಚಿನ ವಧು ವರರಿಗೆ ಶ್ರೀಮಠದ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ವಿವಾಹ ಶಾಸ್ತ್ರ, ಧಾರೆ ಕಾರ್ಯಗಳು ನಡೆಯಲಿದೆ ಎಂದು ಹೇಳಿದರು.

    ಕೇಂದ್ರ ಮತ್ತು ರಾಜ್ಯ ಸಚಿವರಿಗೆ ಆಹ್ವಾನ:

    ಜನ ಜಾಗೃತಿ ಧರ್ಮ ಸಮಾರಂಭದ ವೇದಿಕೆ ಕಾರ್ಯಕ್ರಮವನ್ನು ರಾಜ್ಯ ರೈಲ್ವೆ ಖಾತೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಉದ್ಘಾಟಿಸಲಿದ್ದು, ಗೃಹ ಸಚಿವ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರ ಸಚಿವ ಕೆ.ಎನ್ ರಾಜಣ್ಣ ನೂತನ ದಾಸೋಹ ಭವನ ಉದ್ಘಾಟನೆ ಮಾಡಲಿದ್ದು, ಆಂದ್ರ ಪ್ರದೇಶದ ಮಾಜಿ ಮಂತ್ರಿ ರಘುವೀರ ರೆಡ್ಡಿ ವಸತಿ ಗೃಹ ಉದ್ಘಾಟನೆ, ಗೌರಿಬಿದನೂರು ಶಾಸಕ ಕೆ.ಎಚ್ ಪುಟ್ಟ ಸ್ವಾಮಿಗೌಡ ಮಾಂಗಲ್ಯ ವಿತರಣೆ, ಶಾಸಕ ಜಿ.ಎಸ್ ಪಾಟೀಲ್ ವಸ್ತ ವಿತರಣೆ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಮೂಗುತಿ ವಿತರಣೆ ಮಾಡಲಿದ್ದಾರೆ.

    ಪರಿಸರ ಜಾಗೃತಿ ಕಾಳಜಿಯಿಂದ ಅರಣ್ಯ ಇಲಾಖೆಯ ತುಮಕೂರು ಶಾಸಕ ಜ್ಯೋತಿ ಗಣೇಶ್ ಸ್ಥಳೀಯ ರೈತರಿಗೆ ಸಸಿ ವಿತರಣೆ ಮಾಡಲಿದ್ದು, ಶಾಸಕ ಸುರೇಶ್‌ ಗೌಡ, ಎಂಎಲ್‌ಸಿ ಆರ್.ರಾಜೇಂದ್ರ, ಚಿದಾನಂದ ಗೌಡ, ಪಾವಗಡ ಶಾಸಕ ಶಾಸಕ ವೆಂಕಟೇಶ್ ಸೇರಿ ರಾಜ್ಯದ ಹಲವು ಕ್ಷೇತ್ರದ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಭಾಗವಹಿಸಲಿದ್ದು ಹೆಚ್ಚಿನ ಸಂಖೈಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.

    ಈ ವೇಳೆ ಪ.ಪಂ ಸದಸ್ಯ ಎ ಡಿ ಬಲರಾಮಯ್ಯ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾ.ಅಧ್ಯಕ್ಷ ವೀರಭದ್ರಯ್ಯ, ಉಪಾಧ್ಯಕ್ಷ ಕೆ.ಸಿ ಶಿವಕುಮಾರ್, ಎಂ.ಜಿ ಸುಧೀರ್, ಮಹಿಳಾ ಅಧ್ಯಕ್ಷೆ ದ್ರಾಕ್ಷಾಯಿಣಿ, ರಾಜಣ್ಣ, ಬಿಜೆಪಿ ಮುಖಂಡ ಪವನ್‌ ಕುಮಾರ್, ಮಾಜಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ದೊಡ್ಡೇಗೌಡ್ರು, ಮಾಜಿ ಜಿ.ಪಂ ಅಧ್ಯಕ್ಷೆ ಕುಸುಮ, ಗಿರೀಶ್, ಮಂಜುಳಾ ಆರಾಧ್ಯ, ಕೆ.ಬಿ ಲೋಕೇಶ್, ನಟರಾಜ್, ಮಂಜಣ್ಣ, ಕೆ.ಬಿ ಜಗದೀಶ್, ವಿನಯ್, ರೂಪ ಸೇರಿದಂತೆ ಇತರರು ಇದ್ದರು.

    ಜೂ.8ಕ್ಕೆ ಜನ ಜಾಗೃತಿ ಧರ್ಮ ಸಮಾರಂಭ:

    ಬಾಳೆ ಹೊನ್ನೂರು ಶ್ರೀಮಠದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ದಿವ್ಯ ಸಾನಿಧ್ಯದಲ್ಲಿ ಸಿದ್ದರಬೆಟ್ಟ ಶ್ರಿಮಠದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಹಲವು ಶ್ರೀಮಠದ ಶ್ರೀಗಳ ಸಮ್ಮುಖದಲ್ಲಿ ಜೂ.8ರ ಬೆ.10ಕ್ಕೆ  ಜನ ಜಾಗೃತಿ ಸಮಾರಂಭ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

    ವರದಿ : ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಹುಲಿಕುಂಟೆ ಗ್ರಾ.ಪಂ. ಅಧ್ಯಕ್ಷರಾಗಿ ಅಮೃತ ಮಂಜುನಾಥ್ ಅವಿರೋಧ ಆಯ್ಕೆ

    November 14, 2025

    ಕಸಬಾ ವಿಎಸ್ ಎಸ್ ಎನ್ ನ ನೂತನ ಅಧ್ಯಕ್ಷರಾಗಿ ಗುಂಡಿನಪಾಳ್ಯ ಜಿ.ಸಿ.ರಮೇಶ್ ಅವಿರೋಧ ಆಯ್ಕೆ

    November 12, 2025

    ಕಣ್ಣಿನ ಉಚಿತ ತಪಾಸಣಾ ಶಿಬಿರ:  ಸರಿಯಾದ ಸಮಯಕ್ಕೆ ಕಣ್ಣು ತಪಾಸಣೆ ಅಗತ್ಯ: ಮುರುಳಿಧರ ಹಾಲಪ್ಪ

    November 12, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ನಗರದ ವಿವಿಧೆಡೆ ಉಪಲೋಕಾಯುಕ್ತ ನ್ಯಾಯಮೂರ್ತಿ ದಿಢೀರ್ ಭೇಟಿ: ಅಧಿಕಾರಿಗಳು, ಅಂಗಡಿ ಮಾಲಿಕರಿಗೆ ತರಾಟೆ

    November 15, 2025

    ತುಮಕೂರು: ನಗರದ ಅಂತರಸನಹಳ್ಳಿ ತರಕಾರಿ ಮಾರುಕಟ್ಟೆಯ ವಾಹನ ಪಾರ್ಕಿಂಗ್ ಸ್ಥಳದಲ್ಲಿ ಕಸದ ರಾಶಿಯನ್ನು ಕಂಡ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ…

    ಗುಬ್ಬಿ: ತಾಲೂಕು ಯೋಜನಾ ಹುದ್ದೆಗೆ ಅರ್ಜಿ ಆಹ್ವಾನ

    November 15, 2025

    ನವೆಂಬರ್ 20: ಎಡೆಯೂರು ಲಕ್ಷದೀಪೋತ್ಸವ

    November 15, 2025

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    November 15, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.