ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆಗೆ ಸಂಬಂಧಿಸಿದಂತೆ ನಟ ಕಮಲ್ ಹಾಸನ್ ನಟನೆಯ ಥಗ್ ಲೈಫ್ ಚಿತ್ರಕ್ಕೆ ಭಾರೀ ಹಿನ್ನಡೆ ಸೃಷ್ಟಿಸಿದೆ.
ಚಿತ್ರತಂಡಕ್ಕೆ ಕರ್ನಾಟಕ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಹೌದು… ಥಗ್ ಲೈಫ್ ಚಿತ್ರ ಜೂನ್ 5ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ಕರ್ನಾಟಕ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದ್ದರಿಂದ ರಾಜ್ಯದಲ್ಲಿ ಚಿತ್ರ ಬಿಡುಗಡೆಗೆ ಹಿನ್ನಡೆಯಾಗಿದೆ.
ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಚಿತ್ರತಂಡ ಹೈಕೋರ್ಟ್ ಮೊರೆ ಹೋಗಿದ್ದತ್ತು. ಏನೇ ಆದರೂ ಕ್ಷಮೆ ಕೇಳುವುದಿಲ್ಲ ಎಂದು ಕಮಲ್ ಮೊಂಡಾಟ ಮೆರೆದಿದ್ದರು.
ಇಂದು ಹೈಕೋರ್ಟ್ ನಲ್ಲಿ ಚಿತ್ರತಂಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕ್ಷಮೆ ಕೇಳಿದ್ರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ? ಕನ್ನಡ ಭಾಷೆ ತಮಿಳಿಂದ ಹುಟ್ಟಿದೆ ಅನ್ನೋಕೆ ಅವರೇನು ಇತಿಹಾಸಕಾರರಾ? ಈ ಹಿಂದೆ ಸಿ.ರಾಜಗೋಪಾಲಾಚಾರಿ ಕೂಡ ಕ್ಷಮೆಯನ್ನು ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿ ಅಲ್ಲ, ಪಬ್ಲಿಕ್ ಫಿಗರ್. ಅವರು ಮೊದಲು ಕ್ಷಮೆ ಕೇಳಲಿ, ಆಮೇಲೆ ಅರ್ಜಿ ಪರಿಗಣಿಸ್ತೇವೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW