ತುಮಕೂರು: ತಾಲೂಕಿನ ಹೆಬ್ಬೂರಿನ ಪೆಟ್ರೋಲ್ ಬಂಕ್ ಒಂದರಲ್ಲಿ ಪೆಟ್ರೋಲ್ ನಲ್ಲಿ ಕೆಮಿಕಲ್ ಮಿಕ್ಸ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ರೈತರು ಹಾಗೂ ಸಾರ್ವಜನಿಕರು ಪೆಟ್ರೋಲ್ ಬಂಕ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೆಟ್ರೋಲ್ ಬೆಲೆ ಗಗನಕ್ಕೇರಿದ್ದು, ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಆದರೂ ಸಹ ಈ ರೀತಿ ಪೆಟ್ರೋಲ್ ನಲ್ಲಿ ಕೆಮಿಕಲ್ ಮಿಕ್ಸ್ ಮಾಡುವ ಮೂಲಕ ವಾಹನ ಸವಾರರಿಗೆ ಮೋಸ ಮಾಡುತ್ತಿದ್ದಾರೆ ಎಂದು ಗ್ರಾಹಕರು ಆಕ್ರೋಶ ಹೊರಹಾಕಿದ್ದಾರೆ.
ಇನ್ನು ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಹ ವೈರಲ್ ಆಗಿದೆ.
ವರದಿ: ಮಾರುತಿ ಪ್ರಸಾದ್ , ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB