ಹೆಚ್.ಡಿ.ಕೋಟೆ: ತಾಲೂಕಿನ ಕಟ್ಟೆ ಮನುಗನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುಮಾರು 35 ಕ್ಕೂ ಹೆಚ್ಚು ಬಡ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ವಿತರಣೆ ಮಾಡಲಾಯಿತು.
ಬಳಿಕ ಮಾತನಾಡಿದ ಎ.ಎಸ್.ಐ ದೊರೆಸ್ವಾಮಿ, ನಿಮ್ಮ ಗುರಿಯನ್ನು ತಲುಪುವವರೆಗೂ ಆದಷ್ಟು ಮೊಬೈಲ್ ಗಳಿಂದ ದೂರವಿರಿ ಹಾಗೂ ಉತ್ತಮವಾದ ವಿಚಾರಗಳ ಕಡೆ ಗಮನಹರಿಸಬೇಕು. ಉತ್ತಮವಾದ ಶಿಕ್ಷಣ ಪಡೆದು ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ತಾವು ಪಡೆದ ವಿದ್ಯೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಭವಿಷ್ಯದಲ್ಲಿ ಉತ್ತಮವಾದ ಜೀವನ ರೂಪಿಸಿಕೊಳ್ಳಬೇಕಾದರೆ, ಇಂದೇ ದೊಡ್ಡ ದೊಡ್ಡ ಗುರಿಯನ್ನು ಹೊಂದಿಕೊಳ್ಳಬೇಕು ಎಂದು ಅವರು ಇದೇ ವೇಳೆ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯ ಮಾತುಗಳನ್ನಾಡಿದರು.
ಈ ವೇಳೆ ರಕ್ಷಣಾ ಸೇವಾ ಟ್ರಸ್ಟ್ ನ ಅಧ್ಯಕ್ಷೆ ಚಂದ್ರಿಕಾ ದೊರೆಸ್ವಾಮಿ, ಸೃಷ್ಠಿ ಆರ್ಟ್ಸ್ ನ ಕುಮಾರ್, ವನಸಿರಿ ಶಂಕರಣ್ಣ, ಕಾಳಪ್ಪ, ಪ್ರದೀಪ್ ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB