ಬೆಂಗಳೂರು: ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಹಲವಾರು ಜನರು ಗಾಯಗೊಂಡ ಘಟನೆಯ ಬಳಿಕ ಕರ್ನಾಟಕ ಸರ್ಕಾರವು ಹಿರಿಯ ಐಪಿಎಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ನಗರದ ಹೊಸ ಪೊಲೀಸ್ ಆಯುಕ್ತರನ್ನಾಗಿ ನೇಮಿಸಿದೆ.
ಕಾರ್ಯಕ್ರಮದ ಸಂದರ್ಭದಲ್ಲಿ ಜನಸಂದಣಿಯನ್ನು ನಿರ್ವಹಿಸುವಲ್ಲಿ ತೀವ್ರ ನಿರ್ಲಕ್ಷ್ಯ ಮತ್ತು ವೈಫಲ್ಯವನ್ನು ಉಲ್ಲೇಖಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಗಮಿತ ಪೊಲೀಸ್ ಆಯುಕ್ತ ಬಿ. ದಯಾನಂದ ಅವರನ್ನು ಅಮಾನತುಗೊಳಿಸಿ ಆದೇಶಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW