ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಎಲ್ & ಟಿ ಫೈನ್ಯಾನ್ಸ್, ಟಿ–ಮೇಕ್ ಹಾಗೂ ಹೆಚ್ ಆರ್ ಹೆಚ್ ನೆಕ್ಸ್ಟ್ ಸರ್ವೀಸಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗಾಗಿ ಜೂನ್ 9ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಸಂದರ್ಶನವು ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದ್ದು, ಪಿ.ಯು.ಸಿ, ಐ.ಟಿ.ಐ. ಡಿಪ್ಲೊಮಾ( ಎಲೆಕ್ಟ್ರಾನಿಕ್ , ಎಲೆಕ್ಟ್ರಿಕಲ್, ವೆಲ್ಡರ್, ಪೈಂಟರ್ ಹಾಗೂ ಲೇತ್ ಆಪರೇಟರ್) ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, ಮೊ.ಸಂ.9071021143/ 9513136642ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4