ರಾಜಸ್ಥಾನ: ಐಸಿಯು ವಾರ್ಡ್ ನಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರಿಗೆ ಮತ್ತು ಬರುವ ಇಂಜೆಕ್ಷನ್ ನೀಡಿದ ಆಸ್ಪತ್ರೆ ಸಿಬ್ಬಂದಿ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಆರೋಪಿಯನ್ನು ಸುಭಾಷ್ ಗಠಲಾ ಎಂದು ಗುರುತಿಸಲಾಗಿದೆ. ಘಟನೆಯ ನಂತರ ಆಸ್ಪತ್ರೆಯು ಆತನನ್ನು ಅಮಾನತುಗೊಳಿಸಿದೆ. ಆದರೆ ಇಷ್ಟೊಂದು ಗಂಭೀರವಾ ವಿಚಾರವಾದರೂ, ಆರೋಪಿಯನ್ನು ಬಂಧಿಸಿಲ್ಲ ಎಂದು ತಿಳಿದು ಬಂದಿದೆ.
ಇಂಜೆಕ್ಷನ್ ಪರಿಣಾಮ ಅರೆನಿದ್ರಾವಸ್ಥೆಯಲ್ಲಿ ಸಂತ್ರಸ್ತೆ ಇದ್ದರು. ಐಸಿಯು ಹಾಸಿಗೆ ಸುತ್ತಲೂ ಪರದೆ ಎಳೆಯಲಾಗಿತ್ತು. ಅತ್ಯಾಚಾರ ನಡೆಯುತ್ತಿದ್ದ ವೇಳೆ ಮಹಿಳೆ ಕೂಗಲು ಯತ್ನಿಸಿದ್ದಾರೆ. ಈ ವೇಳೆ ಆಕೆಯ ಪತಿ ಅಲ್ಲಿಗೆ ಹೋಗಿದ್ದಾರೆ. ಆಕೆ ಅರೆ ಪ್ರಜ್ಞಾವಸ್ಥೆಯಲ್ಲಿರುವ ಕಾರಣ ಅತ್ಯಾಚಾರ ನಡೆಯುತ್ತಿದೆ ಎನ್ನುವುದನ್ನು ವಿವರಿಸಲು ಸಾಧ್ಯವಾಗದೇ ನಿದ್ರೆಗೆ ಜಾರಿದರು.
ಮಹಿಳೆಯ ಪತಿ ಆಸ್ಪತ್ರೆಯ ಆಡಳಿತ ಮಂಡಳಿಯನ್ನು ಸಂಪರ್ಕಿಸಿ ತರಾಟೆಗೆ ತೆಗೆದುಕೊಂಡರೂ, ಈ ವಿಷಯವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದರು. ಮಹಿಳೆ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ಗೆ ಮಾಹಿತಿ ನೀಡಿದ ನಂತರ ಆರೋಪಿಯನ್ನು ಅಮಾನತು ಮಾಡಲಾಗಿದೆ. ಇನ್ನೂ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW