ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆಗಸ್ಟ್ 15ರಿಂದ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಸೂಚಿಸಿದರು.
ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW