ಮುಂಬೈ: ರೈಲಿನಿಂದ ಹಳಿ ಮೇಲೆ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ನಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಹೋಗುತ್ತಿದ್ದ ಸ್ಥಳೀಯ ರೈಲಿನಲ್ಲಿ ನಡೆದಿದೆ.
ವರದಿಗಳ ಪ್ರಕಾರ ಕನಿಷ್ಠ 10 ರಿಂದ 12 ಪ್ರಯಾಣಿಕರು ರೈಲಿನಿಂದ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ರೈಲಿನೊಳಗಿನ ಅತಿಯಾದ ಜನಸಂದಣಿಯಿಂದಾಗಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಯಾಣಿಕರು ರೈಲಿನ ಬಾಗಿಲಿನಲ್ಲಿ ನೇತಾಡಿಕೊಂಡು ಪ್ರಯಾಣಿಸುತ್ತಿದ್ದರು. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದು ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.
ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆಯ ತನಿಖೆ ನಡೆಯುತ್ತಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW