nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ
    • ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ
    • ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ
    • ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು
    • ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ ಫೆ.12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ
    • ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಹಿಂದೂ ಕೇವಲ ಧರ್ಮವಲ್ಲ, ಜೀವನ ದರ್ಶನ: ಸಿದ್ಧರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿನಿಂದ ಆರೆಂಜ್–ಯೆಲ್ಲೋ ಅಲರ್ಟ್: ಎಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಮನವಿ
    ತುಮಕೂರು June 11, 2025

    ಇಂದಿನಿಂದ ಆರೆಂಜ್–ಯೆಲ್ಲೋ ಅಲರ್ಟ್: ಎಚ್ಚರಿಕೆ ವಹಿಸಲು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಮನವಿ

    By adminJune 11, 2025No Comments2 Mins Read
    rain

    ತುಮಕೂರು:  ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯಂತೆ ಜೂನ್ 11 ರಿಂದ 14ರವರೆಗೆ ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಗುಡುಗು–ಸಿಡಿಲು ಸಹಿತ ಗಾಳಿ-ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಮತ್ತು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಪ್ರತಿಕೂಲ ಹವಾಮಾನ ಸಮಯದಲ್ಲಿ ಹೆಚ್ಚಿನ ಮುಂಜಾಗ್ರತೆವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಸಿಡಿಲು ಸಹಿತ ಮಳೆಯಾಗುವುದರಿಂದ ಸಿಡಿಲು ಬಡಿಯುವ ಪ್ರದೇಶದ ಬಗ್ಗೆ ರಾಜ್ಯದಿಂದ ಮುಂಚಿತವಾಗಿ ಸಾರ್ವಜನಿಕರಿಗೆ ಎಸ್‌ ಎಂಎಸ್ ಅಲರ್ಟ್ ರವಾನಿಸಲಾಗುವುದು. ತುರ್ತಾಗಿ ಸುರಕ್ಷಿತವಾದ ತಗ್ಗು ಪ್ರದೇಶಕ್ಕೆ ತೆರಳಬೇಕು. ಕೃಷಿ ಕೆಲಸ, ಜಾನುವಾರು ಮೇಯಿಸಲು ಹೋಗಬಾರದು. ಲೋಹದ ತಗಡು ಮನೆಗಳು, ಮರ, ವಿದ್ಯುತ್ ಉಪಕರಣ/ಸರಬರಾಜು, ಮಾರ್ಗ/ಕಂಬ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಜಲಕಾಯಗಳು ಸೇರಿದಂತೆ ಇತರೆ ಪ್ರತ್ಯೇಕ ವಸ್ತುಗಳಿಂದ ದೂರವಿರಬೇಕು. ಕಬ್ಬಿಣದ ಸರಳುಗಳ ಛತ್ರಿ/ಮೊಬೈಲ್ ಫೋನ್ ಬಳಸಬಾರದು. ಮಿಂಚು ಒಬ್ಬರಿಂದ ಒಬ್ಬರಿಗೆ ಸಂಚರಿಸದಂತೆ, ಜನ ಸಂದಣಿಯಾಗದಂತೆ ಅಂತರ ಕಾಪಾಡಬೇಕು. ತುರ್ತು ಚಿಕಿತ್ಸೆಗೆ ಹತ್ತಿರದ ಆರೋಗ್ಯ ಕೇಂದ್ರಗಳ ಮಾಹಿತಿಯನ್ನು ಹೊಂದಿರಬೇಕು.


    Provided by
    Provided by

    ನದಿ, ಹಳ್ಳ ಕೆರೆ ದಡಗಳಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ–ಕರುಗಳನ್ನು ತೊಳೆಯುವುದು ಹಾಗೂ ಫೋಟೋ/ಸೆಲ್ಫಿಗಳನ್ನು ತೆಗೆಯುವುದು, ಅಪಾಯವಿರುವ ಸೇತುವೆಗಳ ಮೇಲೆ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಎಚ್ಚರವಹಿಸಬೇಕು. ಪೋಷಕರು ತಮ್ಮ ಮಕ್ಕಳನ್ನು ಅಪಾಯಕಾರಿಯಾಗಿ ಹರಿಯುವ ನೀರು ಮತ್ತು ಕೆರೆ/ಕಟ್ಟೆಗಳಲ್ಲಿ ಈಜಲು ಬಿಡದಂತೆ ಜಾಗೃತಿವಹಿಸಬೇಕು. ದುರ್ಬಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರಬೇಕು. ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿರಸಬೇಕು. ತೋಟಗಾರಿಕೆ ಬೆಳೆಗಳನ್ನು ಮಳೆಗೆ ಹಾನಿಯಾಗದಂತೆ ಸೂಕ್ತ ರೀತಿಯಲ್ಲಿ ಸಂರಕ್ಷಿಸಿಕೊಳ್ಳಬೇಕು.

    ಕೆರೆ-ಕಟ್ಟೆಗಳ ಏರಿ/ಬಂಡ್/ಕೋಡಿಗಳಲ್ಲಿ ನೀರು ಸೋರಿಕೆ ಕಂಡು ಬಂದಲ್ಲಿ, ರಸ್ತೆಗಳ ಮೇಲೆ ಅಪಾಯಕಾರಿ ಮಟ್ಟದಲ್ಲಿ ನೀರು ಹರಿಯುತ್ತಿದ್ದಲ್ಲಿ/ನಿಂತಿದ್ದಲ್ಲಿ, ಮರ ಬಿದ್ದು ವಾಹನ ಸಂಚಾರ ಸ್ಥಗಿತವಾಗಿದ್ದಲ್ಲಿ, ವಿದ್ಯುತ್ ಲೈನ್/ ಕಂಬ ಬಿದ್ದಿದ್ದಲ್ಲಿ, ಮನೆಯೊಳಗಡೆ ನೀರು ನುಗ್ಗಿದಲ್ಲಿ, ಮನೆ ಗೋಡೆ/ಮೇಲ್ಛಾವಣಿ ಬಿದ್ದಿದ್ದಲ್ಲಿ, ಬೆಳೆ ನಷ್ಟ ಇತರೆ ತುರ್ತು ಪರಿಸ್ಥಿತಿಯಲ್ಲಿ ಸಹಾಯವಾಣಿ ಸಂಖ್ಯೆ: 7304975519 ಅಥವಾ ದೂರವಾಣಿ ಸಂಖ್ಯೆ : 0816–2213400, 155304; ಬೆಸ್ಕಾಂ: 1912/ 8277884019(Whatsapp)ನ್ನು ಸಂಪರ್ಕಿಸಬೇಕೆಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ.

    ಅಧಿಕಾರಿಗಳಿಗೆ ಸೂಚನೆ:

    ಜಿಲ್ಲೆಯಲ್ಲಿ ಬಹುತೇಕ ಭಾಗಗಳಲ್ಲಿ 64.5 ರಿಂದ 204.5 ಮಿ.ಮೀ.ನಷ್ಟು ಭಾರೀ ಪ್ರಮಾಣದಲ್ಲಿ ಮಳೆ ಸಾಧ್ಯತೆಯಿರುವುದರಿಂದ, ಯಾವುದೇ ಜನ–ಜಾನುವಾರುಗಳ ಜೀವ ಹಾನಿಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಭಾರಿ ಮಳೆ/ಪ್ರವಾಹದಿಂದ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಡಂಗೂರ ಸಾರುವುದು/ಮೈಕ್ ಮೂಲಕ ಜನರಿಗೆ ಜಾಗೃತಿ ಮೂಡಿಸಬೇಕು. ನಿರಂತರ ಮಳೆಯಿಂದ ದುರ್ಬಲ ಮಣ್ಣಿನ ಮನೆ/ಕಟ್ಟಡ, ಮರದ ಕೊಂಬೆ, ಜಲಕಾಯ, ವಿದ್ಯುತ್ ವಸ್ತುಗಳಿಂದ ದೂರವಿರುವ ಬಗ್ಗೆ ಎಚ್ಚರವಹಿಸಲು ವ್ಯಾಪಕ ಪ್ರಚಾರ ನೀಡಬೇಕು. ಶಾಲಾ/ಅಂಗನವಾಡಿ ಮೇಲ್ಛಾವಣಿ/ಗೋಡೆ ಹಾಗೂ ನದಿ/ಹಳ್ಳ/ಕೆರೆ/ಕಟ್ಟೆ/ರಸ್ತೆ/ಸೇತುವೆ/ವಿದ್ಯುತ್ ಸಂಪರ್ಕ ಇತ್ಯಾದಿ ಮೂಲಭೂತ ಸೌಕರ್ಯಗಳ ಸುಸ್ಥಿತಿ ಬಗ್ಗೆ ಪರಿಶೀಲಿಸಬೇಕು. ಹಠಾತ್ ಪ್ರವಾಹವಾಗುವ ತಗ್ಗು ಪ್ರದೇಶದ ವಾರ್ಡ್/ಅಂಡರ್ ಪಾಸ್/ರಸ್ತೆಗಳ ಕುರಿತು ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಅರ್ಹ ಪ್ರಕರಣಗಳಿಗೆ ನಿಯಮಾನುಸಾರ ಎನ್‌ ಡಿಆರ್‌ ಎಫ್ ಮಾರ್ಗಸೂಚಿಯಂತೆ ತುರ್ತು ಪರಿಹಾರ ನೀಡಬೇಕೆಂದು ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ರೈತರು ತಮ್ಮ ಜಮೀನು ಮಾರಾಟ ಮಾಡಬೇಡಿ: ಶಾಸಕ ಬಿ.ಸುರೇಶ್ ಗೌಡ ಕಿವಿಮಾತು

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಪ್ರಪಥಮ ಬಾರಿಗೆ ಸಿದ್ದರಬೆಟ್ಟದಲ್ಲಿ ಅದ್ದೂರಿ ಮಹಾ ಶಿವರಾತ್ರಿ ಜಾಗರಣೆ ಮಹೋತ್ಸವ

    February 10, 2026

    ಕೊರಟಗೆರೆ : ಸಿದ್ದರಬೆಟ್ಟದಲ್ಲಿ ಈ ಇದೇ ಮೊದಲ ಬಾರಿಗೆ ಶಿವರಾತ್ರಿ ಹಬ್ಬದ ಜಾಗರಣೆಯನ್ನ ಧರ್ಮ ಪ್ರಚಾರ, ಧರ್ಮದ ಜಾಗೃತಿ, ಹಾಗೂ…

    ತಿಪಟೂರು: ನಿರ್ಗತಿಕರಿಗೆ ಆಸರೆಯಾದ ಧರ್ಮಸ್ಥಳ ಯೋಜನೆ:  201 ಫಲಾನುಭವಿಗಳಿಗೆ ಮಾಶಾಸನ, ‘ವಾತ್ಸಲ್ಯ ಕಿಟ್’ ವಿತರಣೆ

    February 10, 2026

    ನಮ್ಮಲ್ಲೆಲ್ಲ ಯುಸ್ ಲೆಸ್ ಆಫೀಸರ್ ಗಳು: ಡಿ.ಸಿ. ಎದುರೇ ಹರಿಹಾಯ್ದ ಕೆ.ಎನ್.ರಾಜಣ್ಣ

    February 10, 2026

    ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಕಾವಲುಬೀಳು ಗ್ರಾಮಸ್ಥರು

    February 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.