ದೇವನಹಳ್ಳಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಶುಕ್ರವಾರ ಮುಂಜಾನೆ ಸಂಭವಿಸಿದೆ.
ಕೋಲಾರ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆಂಧ್ರ ಸಾರಿಗೆ ಮತ್ತು ಲಾರಿ ಮಧ್ಯೆ ಡಿಕ್ಕಿ ಸಂಭವಿಸಿ ಈ ಅಪಘಾತ ನಡೆದಿದೆ.
ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಸಾವಿಗೀಡಾಗಿದವರು ಎಂದು ಗುರುತಿಸಲಾಗಿದೆ. 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಬಸ್ ಓವರ್ ಟೇಕ್ ಮಾಡುವಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ದುರಂತ ಸಂಭವಿಸಿರುವುದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW