nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಲ್ಪತರು ತಾಂತ್ರಿಕ ಮಹಾವಿದ್ಯಾಲಯಕ್ಕೆ ಎನ್ ಬಿಎ ಮಾನ್ಯತೆ
    ತಿಪಟೂರು June 13, 2025

    ಕಲ್ಪತರು ತಾಂತ್ರಿಕ ಮಹಾವಿದ್ಯಾಲಯಕ್ಕೆ ಎನ್ ಬಿಎ ಮಾನ್ಯತೆ

    By adminJune 13, 2025No Comments2 Mins Read
    tipaturu

    ತಿಪಟೂರು: ಕರ್ನಾಟಕದ  ಪ್ರತಿಷ್ಠಿತ ತಾಂತ್ರಿಕ ಮಹಾವಿದ್ಯಾಲಯಗಳಲ್ಲಿ ಒಂದಾದ ತಿಪಟೂರು ಕಲ್ಪತರು ತಾಂತ್ರಿಕ ಮಹಾವಿದ್ಯಾಲಯಕ್ಕೆ  ನ್ಯಾಷನಲ್ ಬೋರ್ಡ್ ಅಫ್ ಅಕ್ರಿಡೇಷನ್  ಕಮಿಟಿ ಮಾನ್ಯತೆ ದೊರೆತ್ತಿದ್ದು, ಕಲ್ಪತರು ತಾಂತ್ರಿಕ ಮಹಾವಿದ್ಯಾಲಯಕ್ಕೆ  ಎಪ್ರಿಲ್ 26 ರಂದು ಭೇಟಿ ನೀಡಿದ  ಎನ್.ಬಿ.ಎ ತಾಂತ್ರಿಕ ಪರಿಣಿತರ ತಂಡ ಭೇಟಿ ಕಾಲೇಜಿನ ವ್ಯವಸ್ಥೆಗಳು, ಮೂಲಸೌಕರ್ಯ, ವಿದ್ಯಾರ್ಥಿಗಳಿಗೆ ಪಠ್ಯಪೂರಕ ಹಾಗೂ ಪಠ್ಯೇತರ ಸೌಕರ್ಯಗಳು, ಪರಿಶೀಲನೆ ನಡೆಸಿದ್ದು, ಕಮಿಟಿಯ ಶಿಫಾರಸಿನಂತೆ 2025ರಿಂದ 2028ರ ಶೈಕ್ಷಣಿಕ ಸಾಲಿನವರೆಗೆ ಮಾನ್ಯತೆ ನೀಡಿ, ಕಲ್ಪತರು ಇಂಜಿನಿಯರಿಂಗ್ ಕಾಲೇಜು ಸೌಕರ್ಯಗಳು ಹಾಗೂ ಶೈಕ್ಷಣಿಕ ಗುಣಮಟ್ಟದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದೆ.

    ತಿಪಟೂರು ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾನಿಲಯ ಆಡಳಿತ ಭವನದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಲ್ಪತರು ವಿದ್ಯಾಸಂಸ್ಥೆ ಖಜಾಂಚಿ ಶಿವಪ್ರಸಾದ್,  ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ ಕಲ್ಪತರು ನಾಡಿನ ಹೆಮ್ಮೆಯ ಕಾಲೇಜು, ನಮ್ಮ ಕಾಲೇಜು ಗ್ರಾಮೀಣ ಭಾಗದ ಸಾವಿರಾರು ಜನ ವಿದ್ಯಾರ್ಥಿಗಳ ಬಾಳಿನ ಆಶಾಕಿರಣವಾಗಿದ್ದು, ನಮ್ಮ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರು ವಿದ್ಯಾರ್ಥಿಗಳು ದೇಶ ವಿದೇಶಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದು, ಕಾಲೇಜು ಹಾಗೂ ಸಂಸ್ಥೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದು ತಿಳಿಸಿದರು.

    ನಮ್ಮ ಕಾಲೇಜಿನ ಹಿರಿಮೆ ಎಂಬಂತೆ ಪ್ರಸಕ್ತ ಸಾಲಿನಲ್ಲಿ ಕಲ್ಪತರು ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿದ ನ್ಯಾಷನಲ್ ಬೋರ್ಡ್ ಆಫ್ ಅಕ್ರಿಡೇಷನ್, ದೆಹಲಿ ತಂಡ ನಮ್ಮ ಇಂಜಿನಿಯರಿಂಗ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಲ್ಪತರು ಇಂಜಿನಿಯರಿಂಗ್ ಕಾಲೇಜು, ಕಂಪ್ಯೂಟರ್ ಸೈನ್ಸ್ &ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಲೇಜಿನಲ್ಲಿ ಇರುವ ಲ್ಯಾಬ್, ಕ್ಯಾಂಪಸ್, ಬೋಧಕ ಹಾಗೂ ಬೋಧಕೇತರ ವರ್ಗ, ಕಾಲೇಜು ಮೂಲಸೌಕರ್ಯಗಳ ಸೇರಿದಂತೆ ನಮ್ಮ ಶಿಕ್ಷಣದ ಗುಣಮಟ್ಟ ಹಾಗೂ ಸೌಕರ್ಯಗಳನ್ನ ಎಲ್ಲಾ ಆಯಾಮಗಳಲ್ಲಿ ಪರಿಶೀಲನೆ ನಡೆಸಿ, ಕಾಲೇಜು ಸೌಕರ್ಯಗಳು ಹಾಗೂ ಉಪನ್ಯಾಸಕರು ಕಾಲೇಜಿನಲ್ಲಿ ನಡೆಯುತ್ತಿರುವ ಹೊಸ ಹೊಸ ಪ್ರಯೋಗಗಳು ಹಾಗೂ ಸಂಶೋಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತಿಪಟೂರು ಕಲ್ಪತರು ಇಂಜಿನಿಯರ್ ಕಾಲೇಜಿಗೆ ಎನ್ .ಬಿ.ಎ ಮಾನ್ಯತೆ ದೊರೆತಿರುವುದು ಸಂತೋಷ ಉಂಟುಮಾಡಿದ್ದು, ನಮ್ಮ ಸಂಸ್ಥೆಯ ಮೂಲ ಉದ್ದೇಶದಂತೆ ಇನ್ನೂ ಹೆಚ್ಚಿನ ಸೇವೆ ಮಾಡಬೇಕು ಎನ್ನುವ  ಉತ್ಸಾಹ ಹೆಚ್ಚಿಸಿದೆ. ನಮ್ಮ ಸಂಸ್ಥೆಯ ಸಾಧನೆಗೆ ಕಾರಣೀಕರ್ತರಾದ ಸಂಸ್ಥೆಯ ಆಡಳಿತ ಮಂಡಳಿ ಸಿಬ್ಬಂದಿ ವರ್ಗ ಬೋಧಕ ಬೋಧಕೇತರ ವರ್ಗಕ್ಕೆ ಅಭಿನಂದನೆಗಳು ಎಂದು ತಿಳಿಸಿದರು.

    ಕಲ್ಪತರು ವಿದ್ಯಾಸಂಸ್ಥೆ ಉಪಾಧ್ಯಕ್ಷ ಬಾಗೇಪಲ್ಲಿ ನಟರಾಜ್ ಮಾತನಾಡಿ,  ಕಲ್ಪತರು ಇಂಜಿನಿಯರಿಂಗ್ ಕಾಲೇಜಿಗೆ ಎನ್.ಬಿ.ಎ. ಮಾನ್ಯತೆ ದೊರೆತಿದೆ. ನಮ್ಮ ಕಾಲೇಜಿಗೆ ಭೇಟಿ ನೀಡಿದ ನ್ಯಾಷನಲ್ ಬೋರ್ಡ್ ಆಫ್ ಅಕ್ರಿಡೇಷನ್ ತಂಡ ಭೇಟಿ ನೀಡಿದ ವೇಳೆ  ಕಲ್ಪತರು ವಿದ್ಯಾಸಂಸ್ಥೆ ಅತ್ಯುತ್ತಮ ಮೂಲಸೌಕರ್ಯಗಳನ್ನ ಒಳಗೊಂಡಿದ್ದು, ಸ್ವಯುಕ್ತ ವಿಶ್ವವಿದ್ಯಾಲಯದ ಮಾನ್ಯತೆ ಅರ್ಹವಾದ ಎಲ್ಲಾ ಸೌಕರ್ಯಗಳು ಪಡೆಯಿರಿ ಎಂದು ತಿಳಿಸಿದರು.

    ಸಂಸ್ಥೆ ಕಾರ್ಯದರ್ಶಿ ಸುಧಾಕರ್ ಮಾತನಾಡಿ, ಕಲ್ಪತರು ಇಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ನಮ್ಮ ಕಾಲೇಜಿನಲ್ಲಿ ಸುಮಾರು 1,800 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಪಠ್ಯಪೂರಕ ಹಾಗೂ ಪಠ್ಯೇತರ ಚಟುವಟಿಕೆಗಳು ಕ್ರೀಡೆ ಸೇರಿದಂತೆ ಎಲ್ಲಾ ವಿಭಾಗಗಳಿಗೆ ಆದ್ಯತೆ ನೀಡಲಾಗುತ್ತಿದೆ. ನಮ್ಮ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ದೇಶ ವಿದೇಶಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದು, ಶೇಕಡ 60ರಷ್ಟು ಕ್ಯಾಪಸ್ ಸೆಲೆಕ್ಷನ್ ಆಗುತ್ತಿದ್ದಾರೆ. ವಿದ್ಯಾರ್ಥಿಗಳು ಹಾಗೂ ಪೋಷಕರ ಆಶಯಕ್ಕೆ ತಕ್ಕಂತೆ ಸಮಲತ್ತು ನೀಡಿ ಕಾಲೇಜಿನ ಕೀರ್ತಿ ಹೆಚ್ಚಿಸುವ ಕೆಲಸ ಮಾಡಲಾಗುವುದು ಎಂದು ತಿಳಿಸಿದರು

    ಪತ್ರಿಕಾಗೋಷ್ಠಿ ಸಂಸ್ಥೆ ಉಪಾಧ್ಯಕ್ಷ ಟಿ.ಎಸ್.ಬಸವರಾಜು, ಜಿ.ಡಿ.ದೀಪಕ್ ಬಿ.ಎಸ್.,  ಉಮೇಶ್, ಕಾರ್ಯದರ್ಶಿಗಳಾದ ಜಗದೀಶ್ ಮೂರ್ತಿ, ಜಿ.ಎಸ್ ಉಮಾಶಂಕರ್,  ಪ್ರಾಚಾರ್ಯರಾದ ಡಾ.ಜಿ.ಡಿ.ಗುರುಮೂರ್ತಿ, ಉಪನ್ಯಾಸಕರಾದ ಮೈತ್ರಿ, ಸಿ.ರಾಜಶೇಖರ್ ಆರಾಧ್ಯ, ಮುಂತಾದವರು ಉಪಸ್ಥಿತರಿದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ತಿಪಟೂರು: ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ ಮತ್ತು ಮಕ್ಕಳ ಜಾಗೃತಿ ಕಾರ್ಯಕ್ರಮ

    August 13, 2026

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.